ರಾಷ್ಟ್ರೀಯ

ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ

Pinterest LinkedIn Tumblr

raiiiಪುಣೆ(ಪಿಟಿಐ): ದೇಶದ ಹಲವು ರಾಜ್ಯಗಳಲ್ಲಿ ಮೂರುದಿನಗಳಿಂದ ಮಳೆ ಸುರಿಯುತ್ತಿದ್ದು, ಮುಂದಿನ ಐದು ದಿನ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ನಾಗಾಲೆಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶ, ತೆಲಂಗಾಣ, ರಾಲಯಸೀಮ, ಕರ್ನಾಟಕ ಮತ್ತು ಕೇರಳದ ಕರಾವಳಿ ತೀರ ಸೇರಿದಂತೆ ಎಲ್ಲೆಡೆ ಮುಂದಿನ ಮೂರು ದಿನ(ಸೆ. 7, 8, 9) ಧಾರಾಕಾರ ಮಳೆ ಬೀಳಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಅಂಡಮಾನ್ ನಿಕೋಬಾರ್ ದ್ವೀಪ ನಾಗಾಲೆಂಡ್, ಮಣಿಪುರ, ಮಿಜೋರಾಂ, ತ್ರಿಪುರ ಹಾಗೂ ಕೇರಳ ರಾಜ್ಯಗಳಲ್ಲಿ (ಸೆ. 10, 11) ಮತ್ತೆ ಎರಡು ದಿನ ಮಳೆ ಮಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Write A Comment