ನವದೆಹಲಿ: ಹೈಡ್ರಾಲಿಕ್ ವೈಫಲ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.
ವಿಮಾನ ಲ್ಯಾಂಡಿಂಗ್ ಪ್ರಕ್ರಿಯೆ ವೇಳೆ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ಸೋರಿಕೆಯಾಗುತ್ತಿರುವುದನ್ನು ಗಮನಿಸಿದ ಪೈಲಟ್ ತಕ್ಷಣವೇ ತುರ್ತು ಭೂಸ್ಪರ್ಶ ಮಾಡಿದ್ದಾರೆ. ನಂತರ, ತರಾತುರಿಯಲ್ಲಿ ವಿಮಾನದಲ್ಲಿದ್ದ ಎಲ್ಲ 153 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಮಹೇಶ್ ಶರ್ಮಾ ಅವರು ತಿಳಿಸಿದ್ದಾರೆ. ಈ ವಿಮಾನವು 21 ವರ್ಷಕ್ಕಿಂತಲೂ ಹಳೆಯದು ಎಂದು ಮೂಲಗಳು ತಿಳಿಸಿವೆ.