ಶ್ರೀನಗರ: ಬಕ್ರೀದ್ ಅಂಗವಾಗಿ ನಡೆದ ಸಾಮೂಹಿಕ ಪ್ರಾರ್ಥನೆ ಬಳಿಕ ಪ್ರತ್ಯೇಕತಾವಾದಿಗಳ ಗುಂಪೊಂದು ಕಲ್ಲುತೂರಾಟ ನಡೆಸಿದ್ದು, ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.
ಶ್ರೀನಗರದ ಈದ್ಗಾ ಮೈದಾನದಲ್ಲಿ ಬಕ್ರೀದ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನಡೆಸಿದ ಬಳಿಕ ಪ್ರತ್ಯೇಕತಾವಾದಿಗಳು ಕಲ್ಲು ತೂರಾಟ ನಡೆಸುವುದರೊಂದಗೆ ಐಸಿಸ್ ಹಾಗೂ ಪಾಕಿಸ್ತಾನದ ಧ್ವಜವನ್ನು ಹಾರಾಟ ಮಾಡುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಪೋಲೀಸರು ಅಶ್ರುವಾಯು ಪ್ರಯೋಗ ನಡೆಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ.
ಇಂಟರ್ನೆಟ್ ಸೇವೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದಲ್ಲಿ ಗೋಮಾಂಸ ನಿಷೇಧ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಚಿತ್ರಗಳು ಹಾಗೂ ಕಮೆಂಟ್ ಗಳು ಹರಿದಾಡುತ್ತಿದ್ದು, ಈ ಸಂಬಂಧ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಹಾಗೂ ಬ್ರಾಡ್ ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಿದೆ.