ರಾಷ್ಟ್ರೀಯ

ರಾಮಮಂದಿರ ನಿರ್ಮಾಣಕ್ಕಿರುವ ಅಡೆತಡೆಗಳನ್ನು ಕೇಂದ್ರ ತೆರವುಗೊಳಿಸಬೇಕು: ವಿಹೆಚ್‌ಪಿ

Pinterest LinkedIn Tumblr

ramaನವದೆಹಲಿ; ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಖಚಿತಪಡಿಸಲು ಅದಕ್ಕೆ ಎದುರಾಗಿರುವ ಅಡೆತಡೆಗಳನ್ನು ಒಂದು ವರ್ಷದೊಳಗೆ ನಿವಾರಿಸಿ ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

‘ವಿವಾದಿತ ಬಾಬರಿ ಮಸೀದಿಯ ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳಬೇಕು. ಮಂದಿರ ನಿರ್ಮಾಣಕ್ಕೆ ರಾಮ ಜನ್ಮಭೂಮಿ ನ್ಯಾಸ ಈಗಾಗಲೇ ಮೂರು ಲಕ್ಷ ಇಟ್ಟಿಗೆಗಳನ್ನು ಸಂಗ್ರಹಿಸಿದ್ದು, ರಾಮ ಮಂದಿರ ನಿರ್ಮಾಣದ ಕಾನೂನುಬದ್ಧ ಹಕ್ಕನ್ನು ರಾಮ ಜನ್ಮಭೂಮಿ ನ್ಯಾಸಕ್ಕೆ ನೀಡಬೇಕು’, ಎಂದು ವಿಹೆಚ್‌ಪಿ ಒತ್ತಾಯಿಸಿದೆ.

ಮಸೀದಿ ನಿರ್ಮಾಣಕ್ಕೆ ಕೇಂದ್ರ ಬೇರೆ ಜಾಗವನ್ನು ಮಂಜೂರು ಮಾಡಬೇಕು ಎಂದು ಕೂಡ ಸಿಂಘಾಲ್ ಆಗ್ರಹಿಸಿದ್ದಾರೆ.

ಕಳೆದ 2014ರ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ರಾಮ ಮಂದಿರ ನಿರ್ಮಿಸುವ ಭರವಸೆ ನೀಡಿತ್ತು. ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅದನ್ನು ಎತ್ತಿ ಹಿಡಿದಿತ್ತು. ಈಗ ಮೋದಿ ಸರಕಾರ ಅದನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಬೇಕು ಎಂದು ವಿಶ್ವ ಸಂಸ್ಥೆಯ ಮುಖ್ಯಸ್ಥ ಅಶೋಕ್ ಸಿಂಘಾಲ್ ಹೇಳಿದ್ದಾರೆ. ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಕೂಡ ಇದೇ ಮಾತುಗಳನ್ನಾಡಿದ್ದಾರೆ.

Write A Comment