ರಾಷ್ಟ್ರೀಯ

ಪ್ರಧಾನಿ ಮೋದಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಕಡೆಗಣನೆ: ಕೇಜ್ರಿವಾಲ್

Pinterest LinkedIn Tumblr

kejriwal-1ನವದೆಹಲಿ: ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಕಡೆಗಣಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಮಾಜಿ ಪ್ರಧಾನಿ ಜನ್ಮದಿನ ಆಚರಣೆಗೆ ಮತ್ತು ದುರಸ್ಥಿ ಕಾರ್ಯಕ್ಕೆ ಹಣ ನೀಡುವುದನ್ನು ನಿಲ್ಲಿಸಿದೆ ಎಂದು ದೆಹಲಿ ಸಿಎಂ ದೂರಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 146ನೇ ಜಯಂತಿ ಅಂಗವಾಗಿ ರಾಜ್‌ಘಾಟ್‌ಗೆ ತೆರಳಿ ಗೌರವ ನಮನ ಸಲ್ಲಿಸಿದ ಬಳಿಕ ಕೇಜ್ರಿವಾಲ್ ಅವರು ಈ ಹೇಳಿಕೆ ನೀಡಿದ್ದಾರೆ.

ರಾಜ್‌ಘಾಟ್‌ಗೆ ಭೇಟಿ ನೀಡಿದ ಬಳಿಕ ಕೇಜ್ರಿವಾಲ್ ಅವರು ವಿಜಯ್‌ಘಾಟ್‌ಗೆ ತೆರಳಿ ಮಾಜಿ ಪ್ರಧಾನಿಗೂ ನಮನ ಸಲ್ಲಿಸಿದರು. ಬಳಿಕ ಸರಣಿ ಟ್ವೀಟ್ ಮಾಡಿದ ಕೇಜ್ರಿವಾಲ್, ಎನ್‌ಡಿಎ ಸರ್ಕಾರ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

Write A Comment