ರಾಷ್ಟ್ರೀಯ

ಅಖಿಲೇಶ್ ಸರ್ಕಾರದಿಂದ ಗೋ ಹಂತಕರ ರಕ್ಷಣೆ: ಸಂಗೀತ್ ಸೋಮ್

Pinterest LinkedIn Tumblr

som-bjpದಾದ್ರಿ: ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಗೋ ಹಂತಕರನ್ನು ರಕ್ಷಿಸಲು ಮುಂದಾಗಿದೆ ಎಂದು ಬಿಜೆಪಿ ಮುಖಂಡ ಸಂಗೀತ್ ಸೋಮ್ ಆರೋಪಿಸಿದ್ದಾರೆ.

2013 ರ ಮುಜಾಫರ್ ನಗರ ಕೋಮು ಗಲಭೆಯ ಪ್ರಮುಖ ಆರೋಪಿಯಾಗಿರುವ ಸಂಗೀತ್ ಸೋಮ್ ಇಂದು ದಾದ್ರಿಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು ಪ್ರಕರಣದಲ್ಲಿ ಆರೋಪಿಗಳೆಂದು ಪರಿಗಣಿಸಿ ಬಂಧಿಸಿರುವವರ ಬಿಡುಗಡೆಗೆ ಪ್ರಯತ್ನ ನಡೆಸಲಾಗುತ್ತಿದೆ, ಶೀಘ್ರವೇ ಅವರಿಗೆ ಜಾಮೀನು ಸಿಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.

ಉತ್ತರ ಪ್ರದೇಶ ಸರ್ಕಾರ ಏಕಪಕ್ಷಿಯವಾಗಿ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಅಲ್ಪ ಸಂಖ್ಯಾತರನ್ನು ಓಲೈಸಲು ಅಖಿಲೇಶ್ ಯಾದವ್ ಸರ್ಕಾರ ಶ್ರಮಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಅವರು ತನಿಖಾ ವರದಿ ಬಂದ ನಂತರ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದರು.

Write A Comment