ರಾಷ್ಟ್ರೀಯ

ಬಿಹಾರ್ ಚುನಾವಣೆ: ನಾಲ್ಕನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ಹೈಕಮಾಂಡ್

Pinterest LinkedIn Tumblr

bjpನವದೆಹಲಿ:  ಮುಂಬರುವ ಬಿಹಾರ್ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ನಾಲ್ಕನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಹಾಜಿಪುರದಿಂದ ಅವಧೇಶ್‌ಕುಮಾರ್ ಮತ್ತು ಪಾಲಿಗಂಜ್‌ನಿಂದ ಜನಮ್ ಶರ್ಮಾ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿಯ ಕೇಂದ್ರ ಚುನಾವಣೆ ಸಮಿತಿ, ಇಂದು ಇಬ್ಬರು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಕೋಚಾಧಮನ್ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿರುವ ಬಿಜೆಪಿ, ಮೂರನೇ ಪಟ್ಟಿಯಲ್ಲಿ 11 ಅಭ್ಯರ್ಥಿಗಳ ಹೆಸರುಗಳನ್ನು ಈಗಾಗಲೇ ಘೋಷಿಸಿದೆ.

ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಒಟ್ಟು 160 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು ಈಗಾಗಲೇ 155 ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

Write A Comment