ರಾಷ್ಟ್ರೀಯ

ದಾದ್ರಿ ಪ್ರಕರಣ: ನಾಯಕರ ವಿವಾದಾತ್ಮಕ ಹೇಳಿಕೆಯಿಂದ ದೂರ ಉಳಿದ ರಾಜನಾಥ ಸಿಂಗ್

Pinterest LinkedIn Tumblr

Rajnath-Singhಪಾಟ್ನ: ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಾಯಕರು ನೀಡುತ್ತಿರುವ ವಿವಾದತ್ಮಕ ಹೇಳಿಕೆಯಿಂದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ದೂರ ಉಳಿದಿದ್ದು, ನಾಯಕರ ಹೇಳಿಗಳು ಪಕ್ಷದ ಹೇಳಿಕೆಯಲ್ಲ ಎಂದು ಶನಿವಾರ ಸ್ಪಷ್ಟನೆ ನೀಡಿದ್ದಾರೆ.

ದಾದ್ರಿ ಪ್ರಕರಣ ಸಂಬಂಧ ಬಿಜೆಪಿ ನಾಯಕರು ನೀಡುತ್ತಿರು ವಿವಾದಾತ್ಮಕ ಹೇಳಿಕೆ ಕುರಿತಂತೆ ಖಾಸಗಿ ಮಾಧ್ಯಮವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಸಂಬಂಧ ನಾಯಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ಹೇಳಿಕೆಗಳಲ್ಲ. ವೈಯಕ್ತಿಕ ಹೇಳಿಕೆಗಳು. ನಾಯಕರು ತಮ್ಮ ಶ್ರಮವನ್ನು ಸಂಯಮದಿಂದಿರಲು ವ್ಯಯಿಸಬೇಕಿದೆ ಎಂದು ಹೇಳಿದ್ದಾರೆ.

ದಾದ್ರಿ ಪ್ರಕರಣವೊಂದು ದುರಾದೃಷ್ಟಕರ ಘಟನೆ. ದೇಶದಲ್ಲಿ ಸಂಯಮ ಕಾಪಾಡಲು ಎಲ್ಲಾ ರಾಜಕೀಯ ಪಕ್ಷಗಳು ಶ್ರಮಿಸಬೇಕೇ ವಿನಃ ಶಾಂತವಾತಾವರಣವನ್ನು ಭಗ್ನಗೊಳಿಸುವ ಪ್ರಯತ್ನ ಮಾಡಬಾರದು. ಇಂತಹ ಪ್ರಕರಣಗಳು ನಡೆಯದಂತೆ ರಾಜ್ಯ ಸರ್ಕಾರಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ದಾದ್ರಿ ಪ್ರಕರಣ ಲಾಲೂ ಗೋಮಾಂಸ ಹೇಳಿಕೆ ಕುರಿತಂತೆ ಮಾತನಾಡಿರುವ ಅವರು, ಚುನಾವಣೆಯೊಂದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಇಂತಹ ಸಂದರ್ಭದಲ್ಲಿ ಜಾತಿ ಮತ್ತು ಧರ್ಮದ ವಿಷಯಗಳು ಬರಬಾರದು. ಇಂತಹ ಹೇಳಿಕೆಗಳ ಅಗತ್ಯವಿಲ್ಲ. ಇಂತಹ ಹೇಳಿಕೆಗಳು ಜನರ ಗಮನವನ್ನು ಬೇರೆಡೆಗೆ ಕರೆದೊಯ್ಯುತ್ತದೆ. ಅಲ್ಲದೆ, ಪ್ರಚೋದನೆ ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.

Write A Comment