ಶ್ರೀನಗರ (ಪಿಟಿಐ): ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಸಾವನ್ನಪ್ಪಿ, ಇಬ್ಬರು ಯೊಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಇಲ್ಲಿನ ಥಮಾಂಗ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿಕೊಂಡ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬೆಳಿಗ್ಗೆ 7 ಗಂಟೆಗೆ ಶೋಧ ಕಾರ್ಯಾಚರಣೆ ಆರಂಭಿಸಿದರು. ಈ ಹಂತದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಯೋಧರು ಒಬ್ಬ ಉಗ್ರನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭದ್ರತಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆಸಲಾಗಿದೆ
