ರಾಷ್ಟ್ರೀಯ

ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಜೈಲಿನಲ್ಲಿರುವ ಬಿಹಾರದ ಶಾಸಕ

Pinterest LinkedIn Tumblr

biharಪಾಟ್ನ: ಜೈಲಿನಲ್ಲಿರುವ ಬಿಹಾರದ ಶಾಸಕನ ವಿರುದ್ಧ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿರುವ ಪ್ರಕರಣ ದಾಖಲಾಗಿದೆ.

ಪೊಲೀಸರಿಗೆ ಬೆದರಿಕೆ ಹಾಕಿರುವ ಶಾಸಕ ಬಿಹಾರದ ಚುನಾವಣೆಗೆ ಸ್ಪರ್ಧಿಸಿದ್ದು, ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಬಿಹಾರದ ಉಪವಿಭಾಗೀಯ ಪೊಲೀಸ್ ಅಧಿಕಾರಿ ಮನೋಜ್ ತಿವಾರಿ ಆರೋಪಿಸಿದ್ದಾರೆ.

ಬಿಹಾರ ಶಾಸಕ ಅನಂತ್ ಸಿಂಗ್, ಚುನಾವಣೆಗೆ ಸ್ಪರ್ಧಿಸಿದ್ದು ಪ್ರಚಾರದ ವೇಳೆ ತಮ್ಮ ಬೆಂಬಲಿಗರಿಗೆ ಮುಕ್ತ ಅವಕಾಶ ನೀಡಬೇಕು, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೂ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಅನಂತ್ ಸಿಂಗ್ ಉಪವಿಭಾಗಾಧಿಕಾರಿಗೆ ತಾಕೀತು ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಸಕ ಅನಂತ್ ಸಿಂಗ್ ಅಪಹರಣ ಹಾಗು ಕೊಲೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿದ್ದಾರೆ.

Write A Comment