ರಾಷ್ಟ್ರೀಯ

3ನೆ ಭಾರತ-ಆಫ್ರಿಕಾ ಸಂಪಾದಕರ ವೇದಿಕೆಯಲ್ಲಿ ಸುಷ್ಮಾ ಸ್ವರಾಜ್ ಭಾಷಣ: ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಪ್ರಾತಿನಿಧ್ಯ ಅಗತ್ಯ: ಸುಷ್ಮಾ ಸ್ವರಾಜ್

Pinterest LinkedIn Tumblr

Sushma_ಹೊಸದಿಲ್ಲಿ, ಅ.25: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಆಫ್ರಿಕಾ ಖಂಡಗಳಿಗೆ ಪ್ರಾತಿನಿಧ್ಯವಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಈ ಕೊರತೆಯನ್ನು ಹೋಗಲಾಡಿಸುವ ದಿಸೆಯಲ್ಲಿ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ದೇಶಗಳ ಸಂಖ್ಯೆಯ ದೃಷ್ಟಿಯಿಂದ ಆಫ್ರಿಕಾ ಅತಿದೊಡ್ಡ ಖಂಡವಾಗಿದೆ. ಭಾರತವು ಜಗತ್ತಿನ ಆರನೆ ಒಂದರಷ್ಟು ಜನಸಂಖ್ಯೆಯನ್ನು ಹೊಂದಿದೆ. ಆದರೂ ಇಬ್ಬರಿಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸದಸ್ಯತ್ವವಿಲ್ಲ ಎಂದು ಸುಷ್ಮಾ ಸ್ವರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸುಧಾರಣೆಯು ಮಹತ್ವದ ಪ್ರಶ್ನೆಯಾಗಿದೆ. ಇಂದಿಗೂ 1945ರ ಕಾಲದ ಜಾಗತಿಕ ವ್ಯವಸ್ಥೆಯ ಪ್ರತಿನಿಧಿಯಂತೆ ಭದ್ರತಾ ಮಂಡಳಿ ಇದೆ ಎಂದು ಅವರು ಹೇಳಿದರು.

ಭಾರತ ಮತ್ತು ಆಫ್ರಿಕಾ ಖಂಡಗಳಿಗೆ ಭದ್ರತಾ ಮಂಡಳಿಯ ಖಾಯಂ ಸದಸ್ಯರೆನಿಸಿಕೊಳ್ಳುವ ಎಲ್ಲ ಅರ್ಹತೆಗಳಿವೆ. ಆದರೂ, ಇವೆರಡೂ ಅದರಿಂದ ಹೊರಗಿವೆ. ಈ ಕೊರತೆಯನ್ನು ನೀಗಿಸುವ ದಿಸೆಯಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಈ ಕೆಲಸದಲ್ಲಿ ಮಾಧ್ಯಮಗಳು ಮಹತ್ವದ ಪಾತ್ರವನ್ನು ವಹಿಸಬೇಕು ಎಂದು 3ನೆ ಭಾರತ-ಆಫ್ರಿಕಾ ಸಂಪಾದಕರ ವೇದಿಕೆಯನ್ನು ಉದ್ಘಾಟಿಸಿ ಮಾತನಾಡುತ್ತ ಅವರು ನುಡಿದರು.

ಹವಾಮಾನ ಬದಲಾವಣೆ ಮತ್ತು ಜಾಗತಿಕ ವ್ಯಾಪಾರದಂತಹ ಎರಡು ಮಹತ್ವದ ಕ್ಷೇತ್ರಗಳಲ್ಲಿ ಭಾರತ, ಆಫ್ರಿಕ ಮತ್ತು ಇತರ ಅಭಿವೃದ್ಧಿಶೀಲ ದೇಶಗಳು ಒಗ್ಗೂಡಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಈ ವರ್ಷದ ಡಿಸೆಂಬರ್‌ನಲ್ಲಿ ಪ್ಯಾರಿಸ್‌ನಲ್ಲಿ ಹವಾಮಾನ ಬದಲಾವಣೆ ಕುರಿತು ಸಮ್ಮೇಳನ ನಡೆಯಲಿದೆ. ಅದೇ ರೀತಿ, ಕೆನ್ಯಾದಲ್ಲಿ 10ನೆ ಡಬ್ಲುಡಿಒ ಸಚಿವರ ಮಟ್ಟದ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು. ಈ ಎರಡೂ ಸಭೆಗಳಲ್ಲಿ ಭಾರತ, ಆಫ್ರಿಕಾ ಮತ್ತು ಇತರ ಅಭಿವೃದ್ಧಿಶೀಲ ದೇಶಗಳು ಪರಸ್ಪರ ಒಗ್ಗೂಡಿ ಕೆಲಸ ಮಾಡಬೇಕು. ನಮ್ಮ ಅಭಿವೃದ್ಧಿ ಕಾರ್ಯಸೂಚಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

Write A Comment