ರಾಷ್ಟ್ರೀಯ

17 ವರ್ಷದ ಬಾಲಕನಿಂದ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

Pinterest LinkedIn Tumblr

rapeಬಟಾಲಾ(ಪಂಜಾಬ್),: ವಿವಾಹವಾಗುವ ನೆಪದಲ್ಲಿ 17 ವರ್ಷದ ಹದಿಹರೆಯದ ಯುವತಿಯ ಮೇಲೆ 17 ವರ್ಷದ ಹದಿಹರೆಯದ ಬಾಲಕನೊಬ್ಬ ಅತ್ಯಾಚಾರವೆಸಗಿದ ಘಟನೆ ಗಾಂಧಿ ಕ್ಯಾಂಪ್ ಪ್ರದೇಶದಲ್ಲಿ ವರದಿಯಾಗಿದೆ.

17 ವರ್ಷ ವಯಸ್ಸಿನ ಪಿಯುಸಿ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಕಾಲೇಜಿನ ಬಳಿ ಬಂದ 17 ವರ್ಷದ ಬಾಲಕನೊಬ್ಬ, ಆಕೆಗೆ ವಿವಾಹವಾಗುವ ಭರವಸೆ ನೀಡಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ನನ್ನನ್ನು ಮನೆಗೆ ಕರೆದುಕೊಂಡು ಹೋದ ಬಾಲಕ, ಮನೆಯಲ್ಲಿ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುತ್ತಿರುವಾಗ ಬಾಲಕನ ತಾಯಿ ಹೊರಗಡೆಯಿಂದ ಕೋಣೆಗೆ ಬೀಗಹಾಕಿದ್ದಳು ಎಂದು ಯುವತಿ ಆರೋಪಿಸಿದ್ದಾಳೆ.

ಬಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಬಾಲಕ ಮತ್ತು ಆತನ ತಾಯಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಬಾಲಕನನ್ನು ಬಂಧಿಸಲಾಗಿದ್ದು, ಆತನ ತಾಯಿ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಸರಕಾರಿ ಆಸ್ಪತ್ರೆಯಲ್ಲಿ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ನಂತರ ಆಕೆಯನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Write A Comment