ರಾಷ್ಟ್ರೀಯ

ಲೋಕಾಯುಕ್ತ ಕಚೇರಿಯಲ್ಲಿ ಭ್ರಷ್ಟಾಚಾರ ಹಗರಣ: ನಾಲ್ವರು ಆರೋಪಿಗಳಿಗೆ ಜಾಮೀನಿಲ್ಲ

Pinterest LinkedIn Tumblr

loka

ನವದೆಹಲಿ, ನ.2-ಲೋಕಾಯುಕ್ತ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.

ಪ್ರಮುಖ ಆರೋಪಿಗಳಾದ ಸಯ್ಯದ್ ರಿಯಾಜ್, 420 ಭಾಸ್ಕರ್, ಶ್ರೀನಿವಾಸಗೌಡ ಹಾಗೂ ಶಂಕರೇಗೌಡರಿಗೆ ಹೈಕೋರ್ಟ್ ನೀಡಿದ್ದ ಜಾಮೀನಿನ ಮೇಲಿನ ತಡೆಯನ್ನು ಮುಂದುವರಿಸಿರುವ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ ಇದೊಂದು ಅಪರೂಪದ ಅಚ್ಚರಿ ಪ್ರಕರಣವಾಗಿದ್ದು, ಜಾಮೀನು ತಡೆ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಜಾಮೀನುಕೋರಿದ ಅರ್ಜಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ನ್ಯಾಯಾಧೀಶರು, ಜಾಮೀನಿನ ಮೇಲಿನ ತಡೆಯನ್ನು ಮುಂದುವರಿಸಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಕಕ್ಷಿದಾರರ ಪರ ಅಫಿಡೆವಿಟ್ ಸಲ್ಲಿಸುವಂತೆಯೂ ನ್ಯಾಯಾಲಯ ಆರೋಪಿಗಳ ಪರ ವಕೀಲರಿಗೆ ನಿರ್ದೇಶನ ನೀಡಿದೆ.

ಆರೋಪಿಗಳಿಗೆ ಹೈಕೋರ್ಟ್‌ನೀಡಿದ್ದ ಜಾಮೀನಿಗೆ ನೀಡಿದ್ದ ತಡೆಯಾಜ್ಞೆಯನ್ನು ಮಾರ್ಪಡಿಸಲು ಸಾಧ್ಯವೇ ಇಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

Write A Comment