ರಾಷ್ಟ್ರೀಯ

ಪ್ರಧಾನಿಯಿಂದ ಅಧಿಕಾರ ದುರುಪಯೋಗ: ರಾಹುಲ್ ಹೇಳಿಕೆ ಸೂಕ್ತ ಎಂದ ಕಾಂಗ್ರೆಸ್

Pinterest LinkedIn Tumblr

congನವದೆಹಲಿ: ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ಬೆಂಬಲ ಸೂಚಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದ್ದರೂ ಕ್ಯಾರೆ ಎನ್ನದ ಕಾಂಗ್ರೆಸ್ ನಾಯಕರು, ರಾಹುಲ್ ಹೇಳಿಕೆ ಸರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರ ಆನಂದ್ ಶರ್ಮಾ ಮಾತನಾಡಿ, ರಾಹುಲ್ ಹೇಳಿಕೆಯಲ್ಲಿ ತಪ್ಪಿಲ್ಲ. ಬಿಹಾರ್‌ನಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಿ ಶಕ್ತಿಗಳಿವೆ ಎಂದು ಪರೋಕ್ಷವಾಗಿ ಅಲ್ಪಸಂಖ್ಯಾತರ ವಿರುದ್ಧ ವಾಗ್ದಾಳಿ ನಡೆಸಿದ್ದ ಮೋದಿಯವರಿಗೆ ನೋಟಿಸ್ ಜಾರಿ ಮಾಡಬೇಕಾಗಿತ್ತೇ ಹೊರತು ರಾಹುಲ್ ಗಾಂಧಿ ವಿರುದ್ಧವಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಹಿಂದುಗಳು ಮತ್ತು ಮುಸ್ಲಿಮರ ನಡುವೆ ಬಿಕ್ಕಟ್ಟು ಸೃಷ್ಟಿಸುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ಚುನಾವಣೆ ಆಯೋಗ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಬದ್ದವಾಗಿದೆ. ಪ್ರಧಾನಿ ಮೋದಿ ಅಧಿಕಾರ ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಚುನಾವಣಾ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

Write A Comment