ರಾಷ್ಟ್ರೀಯ

ಅಸಹಿಷ್ಣುತೆ: ಮೋದಿ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಚಿಂತನೆ

Pinterest LinkedIn Tumblr

cong

ನವದೆಹಲಿ: ದೇಶಾದ್ಯಂತ ಅಸಹಿಷ್ಣುತೆ ವಾತಾವರಣ ಹೆಚ್ಚುತ್ತಿದೆ ಎನ್ನುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿಕೆಯಿಂದ ಪ್ರೇರಣೆ ಪಡೆದ ಕಾಂಗ್ರೆಸ್, ಇದೀಗ ಮೋದಿ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಚಿಂತನೆ ನಡೆಸಿದೆ.

ನವೆಂಬರ್ 26 ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಬಯಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಸರಕಾರದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ವಿರೋಧಿಸಿ ದೇಶದ ರಾಜ್ಯಗಳ ರಾಜಧಾನಿಗಳಲ್ಲಿ ಮತ್ತು ಪ್ರತಿಯೊಂದು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೆಲ ಪ್ರತಿಭಟನೆಗಳಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಮುಂಬರುವ ಅಧಿವೇಶನದಲ್ಲಿ ಮೋದಿ ಸರಕಾರದ ವಿರುದ್ಧ ಅಸಹಿಷ್ಣುತೆ ವಿಚಾರ ಪ್ರಸ್ತಾಪಿಸಲಾಗುವುದೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.

ಮುಂಬರುವ ಅಧಿವೇಶನದಲ್ಲಿ ವಿಪಕ್ಷಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದತೆ ನಡೆಸಿವೆ ಎನ್ನುವುದನ್ನು ಅರಿತ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಂ.ವೆಂಕಯ್ಯ ನಾಯ್ಡು, ಸರಕಾರ ಅಸಹಿಷ್ಣುತೆ ಬಗ್ಗೆ ಚರ್ಚಿಸಲು ಸಿದ್ದವಿದೆ. ಕಾಂಗ್ರೆಸ್ ನಾಯಕರು ತಾಳ್ಮೆಯನ್ನು ತೋರಿ ಸಂಸತ್ತಿನ ಕಲಾಪ ನಡೆಯಲು ಬಿಡಬೇಕು ಎಂದು ಮನವಿ ಮಾಡಿದ್ದಾರೆ.

Write A Comment