ರಾಷ್ಟ್ರೀಯ

ಬಿಹಾರ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹಮತ: ಅನಂತ್ ಕುಮಾರ್

Pinterest LinkedIn Tumblr

anaಪಾಟ್ನಾ: ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಲಭಿಸಲಿದ್ದು ಸರಕಾರ ರಚಿಸಲಿದೆ ಎಂದು ಬಿಹಾರ್ ರಾಜ್ಯದ ಚುನಾವಣೆ ಉಸ್ತುವಾರಿ ಹೊತ್ತಿರುವ ಬಿಜೆಪಿ ಮುಖಂಡ, ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮೈತ್ರಿಕೂಟದ ವಿರುದ್ಧ ಬಿಜೆಪಿ ನೇತೃತ್ವದ ಮೈತ್ರಿಕೂಟ ಜಯಬೇರಿ ಬಾರಿಸಲಿದೆ. ಉಭಯ ಮೈತ್ರಿಕೂಟಗಳ ನಡುವೆ ಗೆಲುವಿನಲ್ಲಿ ಕೂದಲೆಳೆಯ ಅಂತರವಿದೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.

ಚಾಣಕ್ಯ ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 155 ಸ್ಥಾನಗಳಲ್ಲಿ ಜಯಗಳಿಸಲಿದೆ. ನ್ಯೂಸ್ ಎಕ್ಸ್ ಸಮೀಕ್ಷೆಯ ಪ್ರಕಾರ ಜೆಡಿಯು ಮೈತ್ರಿಕೂಟ 130-140 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ವರದಿ ಮಾಡಿದೆ.

ಸಮೀಕ್ಷೆಗಳ ಬಗ್ಗೆ ಹೆಚ್ಚಿನ ಚರ್ಚೆ ಅಗತ್ಯವಿಲ್ಲ. ನವೆಂಬರ್ 8 ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಸತ್ಯ ಸಂಗತಿ ಹೊರಬೀಳಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

Write A Comment