ರಾಷ್ಟ್ರೀಯ

ನಿತೀಶ್ ಕುಮಾರ್ ಮುಂದಿನ ಬಿಹಾರ್ ಮುಖ್ಯಮಂತ್ರಿ: ಲಾಲು ಘೋಷಣೆ

Pinterest LinkedIn Tumblr

laluಪಾಟ್ನಾ: ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷ ಹೆಚ್ಚಿನ ಸೀಟುಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೂ ಜೆಡಿಯು ಮುಖಂಡ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಜನತಾ ಪರಿವಾರದ ಪಕ್ಷಗಳಲ್ಲಿ ಒಂದು ವೇಳೆ, ಆರ್‌ಜೆಡಿ ಹೆಚ್ಚಿನ ಸೀಟುಗಳಲ್ಲಿ ಜಯಗಳಿಸಿದಲ್ಲಿ ಮುಖ್ಯಮಂತ್ರಿಯಾಗುವವರು ಯಾರು? ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಲಾಲು ಯಾದವ್, ನಿತೀಶ್ ಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅಧಿಕಾರ ಸ್ವೀಕರಿಸಿದಲ್ಲಿ, ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಆರ್‌ಜೆಡಿ ಒತ್ತಾಯಿಸಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಲು ಲಾಲು ನಿರಾಕರಿಸಿದರು.

ಬಿಹಾರ್ ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ನಂತರ ಮುಂದಿನ ಕ್ರಮಗಳ ಬಗ್ಗೆ ಚಿಂತನೆ ನಡೆಸಲಾಗುವುದು. ನಾನಂತೂ ಕಣದಲ್ಲಿಲ್ಲ. ನನ್ನಿಂದಾದ ಕಾರ್ಯವನ್ನು ನಾನು ಮಾಡಿದ್ದೇನೆ ಎಂದರು.

ಮಿನಿ ಜನರಲ್ ಎಲೆಕ್ಷನ್‌ ಕಣವಾಗಿದ್ದ  ಬಿಹಾರ್ ಚುನಾವಣೆಯಲ್ಲಿ ಜನತಾ ಪರಿವಾರ ನಿಚ್ಚಳ ಬಹುಮತ ಪಡೆಯಲಿದ್ದು, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 10 ರಿಂದ 40 ಕ್ಷೇತ್ರಗಳಲ್ಲಿ ಜಯಗಳಿಸಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ದಲಿತರು, ಅಲ್ಪಸಂಖ್ಯಾತರು ಮತ್ತು ಮೇಲ್ವರ್ಗದ ಬಡವರು ಜನತಾ ಪರಿವಾರಕ್ಕೆ ಮತ ನೀಡಿದ್ದರಿಂದ ನಮ್ಮ ಮೈತ್ರಿಕೂಟ 190 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಆರಂಭದಿಂದಲೂ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದು ಆರ್‌ಜೆಡಿ ಮುಖಂಡ ಲಾಲು ಯಾದವ್ ತಿಳಿಸಿದ್ದಾರೆ.

Write A Comment