ರಾಷ್ಟ್ರೀಯ

ಪ್ರಶಸ್ತಿ ಹಿಂತಿರುಗಿಸುವವರಿಗೆ ಬ್ರೇಕ್ ಹಾಕಲು ಮುಂದಾದ ಗೃಹ ಸಚಿವ ರಾಜನಾಥ್ ಸಿಂಗ್ ! ಏನು ಮಾಡಲಿದ್ದಾರೆ ಗೊತ್ತಾ..?

Pinterest LinkedIn Tumblr

rajnath

ನವದೆಹಲಿ: ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಸಾಹಿತಿಗಳು ತಮ್ಮ ಪ್ರಶಸ್ತಿ ಹಿಂತಿರುಗಿಸುತ್ತಿರುವುಕ್ಕೆ ಅವರನ್ನು ಕರೆದು ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಸಾಹಿತಿಗಳು ಮತ್ತು ಬುದ್ಧಿಜೀವಿಗಳು ಪ್ರಶಸ್ತಿಗಳನ್ನು ಹಿಂತಿರುಗಿಸುವುದಕ್ಕೆ ಏನು ಕಾರಣ ಎಂಬುದು ಗೊತ್ತಾಗುತ್ತಿಲ್ಲ. ಗೃಹ ಸಚಿವನಾಗಿ ನಾನು ಅವರನ್ನು ಕರೆದು ಮಾತುಕತೆ ನಡೆಸುತ್ತೇನೆ. ನನಗೆ ಕಾರಣ ಗೊತ್ತಾಗಬೇಕಿದೆ ಎಂದು ಹೇಳಿದರು.

ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ಇದ್ದರೆ ಅದಕ್ಕೆ ಏನು ಕಾರಣ ಎಂಬುದನ್ನು ಬುದ್ಧಿಜೀವಿಗಳಿಂದ ಕೇಳಿ ತಿಳಿದುಕೊಂಡು ಆ ಸಮಸ್ಯೆಯನ್ನು ಹೇಗೆ ಬಗೆಹರಿಸಿಕೊಳ್ಳಬಹುದು ಎಂಬ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂದರು.

ಇದುವರೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಸಾಹಿತಿಗಳು, ಇತಿಹಾಸಕಾರರು, ಸಿನಿಮಾ ಕಲಾವಿದರು, ವಿಜ್ಞಾನಿಗಳು ಸೇರಿದಂತೆ ಸುಮಾರು 75 ಮಂದಿ ತಮ್ಮ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ. ಧಾರ್ಮಿಕ ಅಸಹಿಷ್ಣುತೆಯನ್ನು ವಿರೋಧಿಸಿ ಪ್ರಶಸ್ತಿ ವಾಪ್ಸಿ ಎಂಬ ಅಭಿಯಾನವೇ ಆರಂಭಗೊಂಡಿದೆ.

Write A Comment