ರಾಷ್ಟ್ರೀಯ

ಕಾಂಗ್ರೆಸ್ ಏಕಾಂಗಿಯಾಗಿ ಆರೆಸ್ಸೆಸ್, ಬಿಜೆಪಿಯನ್ನು ಧ್ವಂಸಗೊಳಿಸಲಿದೆ: ರಾಹುಲ್ ಗಾಂಧಿ

Pinterest LinkedIn Tumblr

rahulನವದೆಹಲಿ: ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಬಿಜೆಪಿ ಮತ್ತು ಅದರ ಮಾರ್ಗದರ್ಶಿ ಸಂಸ್ಥೆಯಾದ ಆರೆಸ್ಸೆಸ್‌ನ್ನು ಧ್ವಂಸಗೊಳಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಜಾತ್ಯಾತೀತವಾದ ಕಾಂಗ್ರೆಸ್ ಪಕ್ಷದ ರಕ್ತದಲ್ಲಿದೆ ಅದನ್ನು ಯಾರು ತೆಗೆದುಹಾಕಲು ಸಾಧ್ಯವಿಲ್ಲ. ಜಾತ್ಯಾತೀತವಾದ ಕಾಂಗ್ರೆಸ್ ಪಕ್ಷದ ಡಿಎನ್‌ಎ ಆಗಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸುವುದು ಮಾತ್ರವಲ್ಲದೇ ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಧ್ವಂಸಗೊಳಿಸುತ್ತೇವೆ ಎಂದು ಗುಡುಗಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ನಿಂದ ದೇಶದ ಜನತೆ ಅನಗತ್ಯವಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಆಕ್ರಮಣಕಾರಿ ಪ್ರಚಾರದ ಮೂಲಕ ಕಾಂಗ್ರೆಸ್ ತಕ್ಕ ಪಾಠಕಲಿಸಲಿದೆ ಎಂದರು.

ಮಾಜಿ ಪ್ರಧಾನಿ ಜಾವಹರಲಾಲ್ ನೆಹರು ಅವರ ಜನ್ಮಾದಿನಾಚರಣೆ ಅಂಗವಾಗಿ ಆಯೋಜಿಸಲಾದ ಎರಡು ದಿನಗಳ ರಾಷ್ಟ್ರೀಯ ಸಮ್ಮೆಳನದಲ್ಲಿ ಮಾತನಾಡಿದ ರಾಹುಲ್, ಮುಂಬರುವ ದಿನಗಳಲ್ಲಿ ಎದುರಾಗುವ ಸಮಸ್ಯೆಗಳು ಬೃಹದಾಕಾರವಾಗಿರುವುದರಿಂದ ಕಾಂಗ್ರೆಸ್, ಆರೆಸ್ಸೆಸ್‌ನೊಂದಿಗೆ ಹೋರಾಡುವುದಿಲ್ಲ ಎಂದು ಹೇಳುವುದು ಸರಿಯಲ್ಲ ಎಂದರು.

ಆರೆಸ್ಸೆಸ್‌ನಿಂದ ದೇಶದ ಜನತೆಯ ಸ್ವಾತಂತ್ರ್ಯ, ಅಭಿವೃದ್ಧಿ, ಜಾತ್ಯಾತೀತವಾದ, ಸಾಮಾಜಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳು ನಾಶವಾಗಲಿವೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದರು.

Write A Comment