ರಾಷ್ಟ್ರೀಯ

ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾರಿ ಮಳೆ; ಚಂಡಮಾರುತ ಭೀತಿ

Pinterest LinkedIn Tumblr

rain

ಚೆನ್ನೈ/ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಚಂಡಮಾರುತ ಭೀತಿ ಎದುರಾಗಿದೆ.

ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ತಮಿಳುನಾಡಿನಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಚಂಡಮಾರುತ ಭೀತಿ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಸಮುದ್ರದಲ್ಲಿ ಅಲೆಗಳು ಜೋರಾಗಿರುವುದರಿಂದ ಕರಾವಳಿ ಭಾಗದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲೂ ಸಹ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಭಾರಿ ಮಳೆ ಬರುವ ಮುನ್ಸೂಚನೆಗಳಿವೆ.

ಎರಡು ಸಾವು
ಭಾರಿ ಪ್ರಮಾಣದ ಮಳೆಯಿಂದಾಗಿ ತಮಿಳುನಾಡಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Write A Comment