ರಾಷ್ಟ್ರೀಯ

ಬಿಜೆಪಿ ನಾಯಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ದುರಳರು

Pinterest LinkedIn Tumblr

kamalaರಾಯಪುರ್(;ಚತ್ತೀಸ್‌ಗಢ್: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿದ್ದ ಮಹಿಳೆಯ ಶವ ಬಾಲೋಡಾ ಬಜಾರ್ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಿಜೆಪಿ ನಾಯಕಿ ಮಾಲತಿ ಬಂಜಾರೆ ಮೇಲೆ ಅತ್ಯಾಚಾರವೆಸಗಿ ನಂತರ ಆಕೆಯನ್ನು ಹತ್ಯೆ ಮಾಡಿರುವುದು ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಶಾಂಡಿಲ್ಯ ಮಾತನಾಡಿ, ಮಾಲತಿ ಬಂಜಾರೆಯವರನ್ನು ರಾತ್ರಿಯೇ ರೇಪ್ ಮಾಡಿ ಹತ್ಯೆ ಮಾಡಲಾಗಿದ್ದು, ಬೆಳಿಗ್ಗೆ 11.30 ಗಂಟೆಗೆ ಪೊಲೀಸರಿಗೆ ಮಾಹಿತಿ ತಿಳಿದಿದೆ. ಸರಕಾರಿ ಶಾಲೆಯಿಂದ ಮಾಲತಿಯವರ ನಿವಾಸ ಕೇವಲ 100 ಮೀಟರ್ ದೂರದಲ್ಲಿದೆ ಎಂದು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿದ ನಂತರ ಪ್ರಕರಣದ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳ ಕೆಲ ಸುಳಿವುಗಳು ಪತ್ತೆಯಾಗಿದ್ದರಿಂದ ಅವರ ಬಂಧನಕ್ಕೆ ಜಾಲ ಬೀಸಲಾಗಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಶಾಂಡಿಲ್ಯ ಹೇಳಿದ್ದಾರೆ.

Write A Comment