ರಾಷ್ಟ್ರೀಯ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು, ನಾಳೆ ಕಾರ್ನಾಡ್ ವಿರುದ್ಧ ಬಿಜೆಪಿ ಪ್ರತಿಭಟನೆ

Pinterest LinkedIn Tumblr

ashok

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದಿದ್ದ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಳೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ.

ಈ ಸಂಬಂಧ ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಆರ್.ಅಶೋಕ್ ಅವರು, ವಿವಾದಾತ್ಮಕ ಹೇಳಿಕೆಗಳಿಂದಲೇ ಗಿರೀಶ್ ಕಾರ್ನಾಡ್ ಅವರು ಪ್ರಸಿದ್ಧರಾಗಿದ್ದಾರೆ ಎಂದರು. ಅಲ್ಲದೆ ಕಾರ್ನಾಡ್ ಹೇಳಿಕೆಯನ್ನು ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

ಗಿರೀಶ್ ಕಾರ್ನಾಡ್ ಅವರು ಜಿ ಕೆಟಗರಿ ಸೈಟ್‌ನಲ್ಲಿ ಬಾಳುತ್ತಿದ್ದಾರೆ. ಅವರು ಉಂಡ ಮನೆಗೆ ದ್ರೋಹ ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಮಾಡಿದ್ದಾರೆ ಎಂದು ಅಶೋಕ್ ಜ್ಞಾನಪೀಠ ಸಾಹಿತಿ ವಿರುದ್ಧ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೇಳಬೇಕಾದ ಮಾತುಗಳನ್ನು ಸಾಹಿತಗಳ ಮೂಲಕ ಹೇಳಿಸುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್, ಕೊಡಗಿನ ಗಲಭೆಗೆ ಮುಖ್ಯಮಂತ್ರಿಗಳೇ ನೇರ ಹೊಣೆ ಎಂದರು.

ಇಂದು ಕೊಡಗಿನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರುಪಾಯಿ ಪರಿಹಾರ ನೀಡುಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ಇಲ್ಲವೇ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಅಶೋಕ್ ಆಗ್ರಹಿಸಿದರು.

Write A Comment