ರಾಷ್ಟ್ರೀಯ

ದಲಿತ ಬಾಲಕಿಯ ಮೇಲೆ ಗ್ಯಾಂಗ್ ರೇಪ್

Pinterest LinkedIn Tumblr

gangrape1

ಮುಜಾಫರ್ ನಗರ್: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಶಮ್ಲೀ ಜಿಲ್ಲೆಯ ಗಾಸೋಲಿ ಹಳ್ಳಿಯಲ್ಲಿ ನಡೆದಿದೆ.

15 ವರ್ಷದ ದಲಿತ ಬಾಲಕಿಯ ಮೇಲೆ ಮೂವರು ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ದಿಗ್ವಿಜಯ್ ಸಿಂಗ್ ಮತ್ತು ಸಮಿತ್ ಎಂದು ಗುರುತಿಸಲಾಗಿದೆ.

ಹುಲ್ಲು ತರಲು ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಯುವತಿಯನ್ನು ಹಿಡಿದುಕೊಂಡು ಮೂವರು ಯುವಕರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ತೋಟದಲ್ಲಿ ಯುವತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಳು. ವಿಷಯ ತಿಳಿದ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Write A Comment