ರಾಷ್ಟ್ರೀಯ

ಸುನಂದಾ ಪುಷ್ಕರ್ ಸಾವಿಗೆ ವಿಷ ಪ್ರಾಷನ ಕಾರಣವಲ್ಲ !

Pinterest LinkedIn Tumblr

PTI1_18_2014_000031B

ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ಮಾಡಿ ಸಹಾಯಕ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ವಿಷ ಪ್ರಾಷನದಿಂದ ಸಾವನ್ನಪ್ಪಿಲ್ಲ ಎಂದು ಅಧಿಕಾರಿಗಳಿಗೆ ಎಫ್ ಬಿಐ ಬುಧವಾರ ತಿಳಿಸಿದೆ.

ನಿಗೂಢವಾಗಿ ಸಾವನ್ನಪ್ಪಿದ್ದ ಸುನಂದಾ ಪುಷ್ಕರ್ ಅವರ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಇದರಂತೆ ಈ ಹಿಂದೆ ಸುನಂದಾ ದೇಹದಲ್ಲಿ ರೇಡಿಯಾಕ್ಟಿವ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದ್ದು, ಈ ವಿಷಕಾರಿ ಅಂಶವೇ ಸುನಂದಾ ಸಾವಿಗೆ ಕಾರಣ ಎಂದು ಹೇಳಲಾಗುತ್ತಿತ್ತು. ಆದರೆ, ಈ ವಿಷಕಾರಿ ಅಂಶಗಳನ್ನು ಅಧ್ಯಯನ ಮಾಡಲು ಭಾರತೀಯ ಪ್ರಯೋಗಾಲಯದಲ್ಲಿ ಸೌಲಭ್ಯಗಳಿಲ್ಲ ಎಂದು ಹೇಳಿದ್ದ ಅಧಿಕಾರಿಗಳು ಅಧ್ಯಯನ ನಡೆಸಲು ಮಾದರಿಯನ್ನು ಎಫ್ ಬಿಐ ಪ್ರಯೋಗಾಲಯಕ್ಕೆ ಕಳುಹಿಸಿತ್ತು.

ಇದರಂತೆ ಸುನಂದಾ ಸಾವಿನ ಕುರಿತ ವರದಿಯನ್ನು ಇಂದು ಎಫ್ ಬಿಐ ಪ್ರಯೋಗಾಲಯವು ಅಧಿಕಾರಿಗಳಿಗೆ ಸಲ್ಲಿಸಿದ್ದು, ವರದಿಯಲ್ಲಿ ಸುನಂದಾ ಸಾವಿಗೆ ವಿಕಿರಣಗಳ ವಿಷ ಕಾರಣವಲ್ಲ. ದೇಹದಲ್ಲಿ ಪತ್ತೆಯಾದ ವಿಷವು ಸಾವನ್ನುಂಟು ಮಾಡುವಷ್ಟು ವಿಷಕಾರಿಯಾಗಿಲ್ಲ ಎಂದು ಹೇಳಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರು, ಸುನಂದಾ ಸಾವಿಗೆ ಕಾರಣವಾಗಿರುವ ಪ್ರಮುಖ ಅಂಶಗಳನ್ನು ಶೀಘ್ರದಲ್ಲೇ ಬಹಿರಂಗ ಪಡಿಸಲಾಗುವುದು. ಇದೀಗ ಎಫ್ ಬಿಐ ಸಲ್ಲಿಸಿರುವ ವರದಿಯಲ್ಲಿ ಸುನಂದಾ ಸಾವಿಗೆ ರೇಡಿಯಾಕ್ಟಿವ್ ವಿಷಕಾರಿ ಅಂಶ ಕಾರಣವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಎಂದು ಹೇಳಿದ್ದಾರೆ.

2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಅವರ ಮೃತ ದೇಹ ಪತ್ತೆಯಾಗಿತ್ತು. ಈ ಸಾವು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.

Write A Comment