ರಾಷ್ಟ್ರೀಯ

ಅಸ್ಸಾಂ ನಲ್ಲಿ ಮೂವರು ಉಗ್ರರ ಬಂಧನ

Pinterest LinkedIn Tumblr

arrest

ಅಸ್ಸಾಂ: ದಿಮಾ ಹಸಾವೋ ರಾಷ್ಟ್ರೀಯ ಸೇನೆಗೆ ಸೇರಿದ ಮೂವರು ಉಗ್ರರನ್ನು ಅಸ್ಸಾಂ ರೈಫಲ್ಸ್ ನ ಸಿಬ್ಬಂದಿ ಬಂಧಿಸಿದ್ದಾರೆ.

ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ರೈಫಲ್ಸ್ ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರಿರುವ ಬಗ್ಗೆ ಮಾಹಿತಿ ಪಡೆದ   ಅಸ್ಸಾಂ ರೈಫಲ್ಸ್ ನ ಸಿಬ್ಬಂದಿಗಳು ದಿಮಾ ಹಸಾವೋ ಜಿಲ್ಲೆಯಲ್ಲಿ ದಾಳಿ ನಡೆಸಿ ಮೂವರು ಉಗ್ರರನ್ನು ಬಂಧಿಸಿದ್ದಾರೆ. ಹಲವು ಸಾವಿರ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ 4  ಎಕೆ ರೈಫಲ್ಸ್ ಗಳನ್ನು ಹಾಗೂ 18 ಲೋಡೆಡ್ ಮ್ಯಾಗಜೀನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಉಗ್ರರನ್ನು ಪೊಲೀಸರು ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಶಸ್ತ್ರಾಸ್ತ್ರಗಳನ್ನು ಮಯಾನ್ಮಾರ್  ನಿಂದ ಮಿಜೋರಾಂ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು   ಗುಪ್ತಚರ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.

Write A Comment