ರಾಷ್ಟ್ರೀಯ

60 ವರ್ಷಕ್ಕೆ ರಾಜಕೀಯದಿಂದ ನಿವೃತ್ತಿ: ಅಮಿತ್ ಶಾ ಹೇಳಿಕೆಗೆ ತೀವ್ರ ವಿರೋಧ

Pinterest LinkedIn Tumblr

amithನವದೆಹಲಿ: ಜನಸಂಘ ಮುಖಂಡ ನಾನಾಜಿ ದೇಶಮುಖ್ ರಾಜಕಾರಣಿಗಳ ನಿವೃತ್ತಿ ವಯಸ್ಸು 60 ವರ್ಷ ಎಂದಿರುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿರುವ ಹೇಳಿಕೆ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಬಿಹಾರ್ ವಿಧಾನಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಸೋಲಿಗೆ ಹೊಣೆ ಯಾರು ಎಂದು ಪ್ರಶ್ನಿಸಿದ್ದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಷಿ, ಯಶ್ವಂತ್ ಸಿನ್ಹಾ ಶಾಂತಕುಮಾರ್ ಅವರನ್ನು ಉದ್ದೇಶಿಸಿ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎನ್ನುವುದು ರಾಜಕೀಯ ಮುಖಂಡರ ಅಭಿಪ್ರಾಯವಾಗಿದೆ.

ರಾಜಕೀಯದಲ್ಲಿ ರಾಜಾಕರಣಿಗಳು 60 ವರ್ಷಕ್ಕೆ ನಿವೃತ್ತಿಯನ್ನು ಘೋಷಿಸಿ ಸಮಾಜ ಸೇವೆ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ದೇಶಮುಖ್ ಸಲಹೆ ನೀಡಿದ್ದಾರೆ ಎಂದು ಉತ್ತರಪ್ರದೇಶದ ಚಿತ್ರಕೂಟ್‌ ಜಿಲ್ಲೆಯಲ್ಲಿ ಸದ್ಗುರು ಸಂಘ್ ಟ್ರಸ್ಟ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಅಮಿತ್ ಶಾ ಹೇಳಿಕೆ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿಯ ಹಿರಿಯ ನಾಯಕರನ್ನು ಉದ್ದೇಶಿಸಿಯೇ ಹೇಳಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ.

ಅಮಿತ್ ಶಾ ನಾನಾಜಿ ದೇಶಮುಖ್ ಹೇಳಿದ್ದನ್ನು ಉಲ್ಲೇಖಿಸಿದ್ದಾರೆಯೇ ಹೊರತು ತಮ್ಮ ಸ್ವಂತ ಹೇಳಿಕೆಯಲ್ಲ ಎಂದು ಬಿಜೆಪಿ ವಕ್ತಾರರು ಸಮರ್ಥಿಸಿಕೊಂಡಿದ್ದಾರೆ.

Write A Comment