ರಾಷ್ಟ್ರೀಯ

ನವೆಂಬರ್ 20 ರಂದು ನಿತೀಶ್ ಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ

Pinterest LinkedIn Tumblr

nitishಪಾಟ್ನಾ: ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ನಿತೀಶ್ ಕುಮಾರ್, ನವೆಂಬರ್ 20 ರಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮಹಾಮೈತ್ರಿಕೂಟದ ನಾಯಕರಾಗಿ ಆಯ್ಕೆಯಾದ ನಿತೀಶ್ ಕುಮಾರ್, ರಾಜ್ಯಪಾಲ ರಾಮ್‌ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ, ನವೆಂಬರ್ 20 ರಂದು ಗಾಂಧಿಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸುವುದಾಗಿ ತಿಳಿಸಿದ್ದಾರೆ.

ರಾಜಭವನದಲ್ಲಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿ ಹೊರಬಂದ ನಿತೀಶ್, ಸಚಿವ ಸಂಪುಟದಲ್ಲಿ ಜೆಡಿಯು, ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರು ಕೂಡಾ ಸ್ಥಾನ ಪಡೆಯಲಿದ್ದಾರೆ ಎಂದರು.

ಎಷ್ಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಹಾರ್ ವಿಧಾನಸಭೆಯಲ್ಲಿ 36 ಸಚಿವರನ್ನು ಆಯ್ಕೆ ಮಾಡುವ ಗರಿಷ್ಠ ಮಿತಿ ಹೊಂದಿದೆ ಎಂದು ತಿಳಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಆಡ್ವಾಣಿಯವರನ್ನು ಆಹ್ವಾನಿಸಲಾಗುವುದೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ, ಮುಂಬರುವ ದಿನಗಳಲ್ಲಿ ನಿರ್ಧಾರ ತೆಗೆದುಕೊಂಡು ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಭಾವಿ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

Write A Comment