ರಾಷ್ಟ್ರೀಯ

ಭಯೋತ್ಪಾದನೆ ವಿಶ್ವದ ಅತಿದೊಡ್ಡ ಶತ್ರು: ಮಮತಾ ಬ್ಯಾನರ್ಜಿ

Pinterest LinkedIn Tumblr

mamata-banarjiಕೋಲ್ಕತಾ: ಪ್ಯಾರಿಸ್ ಮತ್ತು ಬೈರುತ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉಗ್ರವಾದ ವಿಶ್ವದ ಬಹುದೊಡ್ಡ ಶತ್ರುವಾಗಿದೆ ಎಂದು ಹೇಳಿದ್ದಾರೆ.

ಪ್ಯಾರಿಸ್ ಮತ್ತು ಬೈರುತ್‌ನಲ್ಲಿ ಐಸಿಸ್ ಉಗ್ರರು ನಡೆಸಿದ ದಾಳಿಯಲ್ಲಿ ಮುಗ್ದರು ಬಲಿಯಾಗಿದ್ದಾರೆ. ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ದೇವರು ದುಖಃವನ್ನು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 153 ಮಂದಿ ಬಲಿಯಾಗಿದ್ದು 200 ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಗುರುವಾರದಂದು ಬೈರುತ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 43 ಮಂದಿ ಸಾವನ್ನಪ್ಪಿದ್ದು 240 ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದರು.

Write A Comment