ರಾಷ್ಟ್ರೀಯ

ಬೇನಾಮಿ ಆಸ್ತಿ ಪ್ರಕರಣ: ಮಾಜಿ ಸಿಜೆಐ ಬಾಲಕೃಷ್ಣನ್‌ಗೆ ಸರಕಾರದಿಂದ ಕ್ಲೀನ್ ಚಿಟ್

Pinterest LinkedIn Tumblr

KGGಹೊಸದಿಲ್ಲಿ,ನ.17: ಮಾಜಿ ಮುಖ್ಯ ನ್ಯಾಯಾಧೀಶ ಕೆ.ಜಿ.ಬಾಲಕೃಷ್ಣನ್ ಮತ್ತು ಅವರ ಕುಟುಂಬ ಸದಸ್ಯರು ಬೇನಾಮಿ ಆಸ್ತಿಗಳನ್ನು ಹೊಂದಿದ್ದಾರೆನ್ನುವುದಕ್ಕೆ ಯಾವುದೇ ಸಾಕ್ಷಾಧಾರಗಳಿಲ್ಲ ಎಂದು ಕೇಂದ್ರವು ಮಂಗಳವಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿತು.

ಆದಾಯ ತೆರಿಗೆ ಇಲಾಖೆಯು ಪ್ರಕರಣದ ತನಿಖೆಯನ್ನು ನಡೆಸಿದ್ದು, ಅದು ಬಾಲಕೃಷ್ಣನ್ ಮತ್ತು ಅವರ ಕುಟುಂಬ ಸದಸ್ಯರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ನ್ಯಾ.ದೀಪಕ್ ಮಿಶ್ರಾ ನೇತೃತ್ವದ ಪೀಠಕ್ಕೆ ತಿಳಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು, ಸರಕಾರವು ಈ ಬಗ್ಗೆ ಸ್ಥಿತಿಗತಿ ವರದಿಯೊಂದನ್ನು ಮುಂದಿನ ವಿಚಾರಣೆಯ ದಿನದಂದು ಸಲ್ಲಿಸಲಿದೆ ಎಂದು ಹೇಳಿದರು.

ಇಂತಹ ಆಧಾರರಹಿತ ಆರೋಪಗಳು ಅರ್ಜಿಗಳು ವ್ಯಕ್ತಿಯ ಪ್ರತಿಷ್ಠೆಗೆ ಹಾನಿಯನ್ನುಂಟು ಮಾಡುವುದರಿಂದ ಅವುಗಳನ್ನು ವಿಚಾರಣೆಗೆ ಅಂಗೀಕರಿಸಬಾರದು ಎಂದು ಅವರು ನ್ಯಾಯಾಲಯವನ್ನು ಕೋರಿಕೊಂಡರು.

Write A Comment