ನೊಯ್ಡಾ,: ದೆಹಲಿ ಪೊಲೀಸ್ ಅಸಿಸ್ಟಂಟ್ ಕಮಿಷನರ್ ಓರ್ವರು ನೊಯ್ಡಾದ ತಮ್ಮ ನಿವಾಸದಲ್ಲಿ ಸರ್ವೀಸ್ ರಿವಾಲ್ವರ್ ಮೂಲಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುರಂತ ಇಷ್ಟಕ್ಕೆ ಕೊನೆಯಾಗಿಲ್ಲ. ಪತಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಅವರ ಪತ್ನಿ ಕೂಡ 6 ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾರೆ.
ಮೃತ ಅಧಿಕಾರಿಯನ್ನು ದೆಹಲಿ ಪೊಲೀಸ್ ವಿಶೇಷ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಸಿಂಗ್ ಎಂದು ಗುರುತಿಸಲಾಗಿದ್ದು, 6 ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭಿಸಿದೆ.
ಸಿಂಗ್ ಅವರ ಮೃತ ದೇಹವನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಮೃತ ಪೊಲೀಸ್ ಅಧಿಕಾರಿ ಸಿಂಗ್ ದೆಹಲಿಯಲ್ಲಿ 2014ರಲ್ಲಿ ನಡೆದ ರೋಡ್ ರೇಜ್ ಪ್ರಕರಣದಲ್ಲಿ ಹಲ್ಲೆಗೊಳಗಾಗಿದ್ದರು.
ದಂಪತಿಗಳಿಗೆ 2 ವರ್ಷದ ಮಗುವಿದೆ ಎಂದು ತಿಳಿದು ಬಂದಿದೆ. ದಂಪತಿಗಳ ಈ ಕೆಟ್ಟ ನಿರ್ಧಾರಕ್ಕೆ ಕಾರಣವೇನೆಂದು ತಿಳಿಯಲು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.