ರಾಷ್ಟ್ರೀಯ

ಇಂದಿನಿಂದ ರಾಜನಾಥ್ ಸಿಂಗ್ ಆರು ದಿನಗಳ ಚೀನಾ ಪ್ರವಾಸ

Pinterest LinkedIn Tumblr

rajನವದೆಹಲಿ: ಉಭಯ ರಾಷ್ಟ್ರಗಳ ನಡುವಿನ ಭಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಚೀನಾದ ಬೀಜಿಂಗ್‌ಗೆ ಭೇಟಿ ನೀಡಿದ್ದಾರೆ.

ಸಚಿವ ರಾಜನಾಥ್ ಸಿಂಗ್ ಆರು ದಿನಗಳ ಕಾಲ ಚೀನಾದಲ್ಲಿ ಪ್ರವಾಸ ಮಾಡಲಿದ್ದು, ದ್ವಿಪಕ್ಷೀಯ ಸಭೆಗಳಲ್ಲಿ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಭೇಟಿಯಿಂದಾಗಿ ಉಭಯ ದೇಶಗಳ ನಡುವಿರುವ ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಲಿಗದ್ದು, ಪರಸ್ಪರರ ಮಧ್ಯೆ ಸೌಹಾರ್ದಯುತ ಬೆಳೆಯಲು ಕಾರಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಕಳೆದ 10 ವರ್ಷದಲ್ಲಿ ಮೊದಲ ಬಾರಿಗೆ ಗೃಹ ಸಚಿವರೊಬ್ಬರು ಚೀನಾ ದೇಶಕ್ಕೆ ಭೇಟಿ ನೀಡುತ್ತಿದ್ದು, ಬೀಜಿಂಗ್ ಮತ್ತು ಶಾಂಘೈನಲ್ಲಿ ಚೀನಾದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ಮೇ ತಿಂಗಳಲ್ಲಿ ಚೀನಾ ದೇಶಕ್ಕೆ ಭೇಟಿ ನೀಡಿದ್ದಾಗ, ಉಭಯ ರಾಷ್ಟ್ರಗಳು ಮಾತುಕತೆ ಮೂಲಕ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ, ಗಡಿವಿವಾದ ಇತ್ಯರ್ಥಕ್ಕೆ ಚಾಲನೆ ನೀಡಿದ್ದರು.

Write A Comment