ರಾಷ್ಟ್ರೀಯ

ಪುತ್ರಿ ವಿವಾಹ: ಸೋನಿಯಾ, ರಾಹುಲ್‌ಗೆ ಆಹ್ವಾನ ನೀಡಿದ ಸಚಿವ ಅರುಣ್ ಜೇಟ್ಲಿ

Pinterest LinkedIn Tumblr

arunನವದೆಹಲಿ: ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಇಂದು ತಮ್ಮ ಪುತ್ರಿಯ ವಿವಾಹಕ್ಕೆ ಆಮಂತ್ರಣ ನೀಡಲು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಜೇಟ್ಲಿಯವರ ಆತ್ಮಿಯ ವಲಯದಲ್ಲಿರುವವರ ಪ್ರಕಾರ, ಜೇಟ್ಲಿ ಇಂದು ಬೆಳಿಗ್ಗೆ ಸೋನಿಯಾ ಮತ್ತು ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ, ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಪುತ್ರಿಯ ವಿವಾಹಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

ಮಹಾಜನ್ ಮೊಮ್ಮಗಳು ಪ್ರಿಯಾಂಕಾ ಅವರನ್ನು ಭೇಟಿ ಮಾಡುವ ಇಚ್ಚೆ ವ್ಯಕ್ತಪಡಿಸಿದ್ದರಿಂದ ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ ಅವರನ್ನು ಭೇಟಿ ಮಾಡಿದ್ದಾರೆ. ಇದೊಂದು ಸೌಜನ್ಯಯುತ ಭೇಟಿ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.

Write A Comment