ನವದೆಹಲಿ: ಭೃಷ್ಟಾಚಾರವನ್ನು ನಿಮೂರ್ಲನೆಗೊಳಿಸಲು ತಮ್ಮ ಸರ್ಕಾರ ಪಟ್ಟುಬಿಡದೆ ಹೋರಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭ್ರಷ್ಟ ಅಧಿಕಾರಿಗಳ ನ್ಯಾಯಸಮ್ಮತವಲ್ಲದ ಸಂಪತ್ತನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂಬ ಪ್ರಾಚೀನ ಭಾರತದ ಅದ್ವಿತೀಯ ಅರ್ಥಶಾಸ್ತ್ರಜ್ಞ ಕೌಟಿಲ್ಯನ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ಕಪ್ಪು ಹಣದ ವಿರುದ್ಧ ತಮ್ಮ ಸರ್ಕಾರ ನಿರಂತರ ಹೋರಾಟವನ್ನು ನಡೆಸುತ್ತಿದೆ, ಇದಕ್ಕೆ ಸಂಬಂಧಿಸಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಆಸ್ತಿ ವಸೂಲಾತಿ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ಆರನೇ ಗ್ಲೋಬಲ್ ಫೋಕಲ್ ಪಾಯಿಂಟ್ ಕಾನ್ಫರೆನ್ಸ್ (GFPC),ನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಪ್ರಧಾನಿ, “ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಮಗ್ರ ಮತ್ತು ನಿರೋಧಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು ಸಹ ರಚಿಸಲಾಗಿದೆ”, ಎಂದು ತಿಳಿಸಿದ್ದಾರೆ.
“ಸಮೃದ್ಧ ಭಾರತವನ್ನು ನಿರ್ಮಿಸುವುದು ನಮ್ಮ ಗುರಿಯಾಗಿದೆ ಆಗಿದೆ. ಈ ಉದ್ದೇಶವನ್ನು ಸಾಧಿಸಲು, ಭ್ರಷ್ಟಾಚಾರದ ವಿರುದ್ಧ ಪಟ್ಟುಬಿಡದ ಹೋರಾಟ ಅತ್ಯಗತ್ಯ. ಭ್ರಷ್ಟಾಚಾರ ಒಂದು ಪ್ರಮುಖ ಸವಾಲಾಗಿದೆ. ಭಾರತ ದೇಶ ಕಟ್ಟುವ ನಿರ್ಣಾಯಕ ಹಂತದಲ್ಲಿದೆ. ಹೀಗಾಗಿ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಅವಶ್ಯ,” ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ.