ರಾಷ್ಟ್ರೀಯ

ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ: ಚುನಾವಣೆ ಆಯೋಗ ಗ್ರೀನ್ ಸಿಗ್ನಲ್

Pinterest LinkedIn Tumblr

hennuಭೋಪಾಲ್(ಮಧ್ಯಪ್ರದೇಶ),: ಮಹಿಳೆಯರಿಗೊಂದು ಸಂತಸದ ಸುದ್ದಿ ಬಂದಿದೆ. ಸರಕಾರಿ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಚುನಾವಣೆ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ.

ದೀರ್ಘಾವಧಿಯಿಂದ ನೆನಗುದಿಯಲ್ಲಿದ್ದ ಸರಕಾರಿ ಹುದ್ದೆಗಳಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿ ಪ್ರಸ್ತಾವನೆಗೆ ಚುನಾವಣೆ ಆಯೋಗ ಕೊನೆಗೂ ಅಂತಿಮ ನಿರ್ಧಾರ ತೆಗೆದುಕೊಂಡಿದೆ.

ಮಧ್ಯಪ್ರದೇಶದ ಸಚಿವ ಸಂಪುಟ ಅನುಮತಿ ನೀಡಿದ ಮಹಿಳಾ ಮೀಸಲಾತಿ ಜಾರಿಗೊಳಿಸುವಂತೆ ಚುನಾವಣೆ ಆಯೋಗ, ರಾಜ್ಯ ಸರಕಾರಕ್ಕೆ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕಿಂತ ಮೊದಲು, ಅರಣ್ಯ ಇಲಾಖೆ ಹೊರತುಪಡಿಸಿ ಸರಕಾರಿ ಹುದ್ದೆಗಳಲ್ಲಿ ಶೇ.30 ರಷ್ಟು ಮಹಿಳಾ ಮೀಸಲಾತಿಯನ್ನು ಸರಕಾರ ಜಾರಿಗೊಳಿಸಿತ್ತು. ಇದೀಗ, ಸರಕಾರ ಶೇ.3 ರಷ್ಟು ಮಹಿಳಾ ಮೀಸಲಾತಿ ಹೆಚ್ಚಳಗೊಳಿಸಿ ಆದೇಶ ಹೊರಡಿಸಿದಂತಾಗಿದೆ.

Write A Comment