ರಾಷ್ಟ್ರೀಯ

ಭ್ರಷ್ಟಾಚಾರ ಸಹಿಸುವುದಿಲ್ಲ: ಲಾಲು ಪುತ್ರ, ಉಪಮುಖ್ಯಮಂತ್ರಿ ತೇಜಸ್ವಿ ಗುಡುಗು

Pinterest LinkedIn Tumblr

laluಪಾಟ್ನಾ,: ಬಿಹಾರ್ ಉಪಮುಖ್ಯಮಂತ್ರಿ, ಲಾಲು ಯಾದವ್ ಪುತ್ರ ತೇಜಸ್ವಿ ಯಾದವ್, ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.

ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ, ಬಿಹಾರ್ ರಾಜ್ಯ ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ರಾಜ್ಯವಾಗಬೇಕು ಎನ್ನುವುದು ನನ್ನ ಬಯಕೆಯಾಗಿದೆ. ಆದ್ದರಿಂದ, ಭ್ರಷ್ಟಾಚಾರವನ್ನು ಯಾವತ್ತೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತೇಜಸ್ವಿ ಯಾದವ್‌ಗೆ ಉಪಮುಖ್ಯಮಂತ್ರಿ ಹುದ್ದೆಯ ಜೊತೆ ಲೋಕೋಪಯೋಗಿ ಇಲಾಖೆ ಕೂಡಾ ನೀಡಲಾಗಿದ್ದರಿಂದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಯೊಂದು ಗ್ರಾಮಕ್ಕೂ ರಸ್ತೆ ಸಂಪರ್ಕವಿರಬೇಕು. ತ್ವರಿತ ಗತಿಯಲ್ಲಿ ರಸ್ತೆ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ಮೊದಲು ನಾನು ಅಧಿಕಾರಿಗಳ ಪರಿಚಯ ಮಾಡಿಕೊಂಡು ನಂತರ ಚಾಲನೆಯಲ್ಲಿರುವ ಯೋಜನೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ನಾವು ನಮ್ಮ ಕೆಲಸವನ್ನು ನಿಷ್ಠೆಯಿಂದ ಪ್ರಾಮಾಣಿಕವಾಗಿ ಮಾಡುತ್ತೇವೆ. ಯಾರಾದರೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಕಂಡು ಬಂದಲ್ಲಿ, ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಹಾರ್ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Write A Comment