ರಾಷ್ಟ್ರೀಯ

ಆಪ್ ಶಾಸಕಿ ವಿರುದ್ಧ ಅಸಭ್ಯ ಭಾಷೆ ಬಳಸಿದ ಬಿಜೆಪಿ ಶಾಸಕನ ವಿರುದ್ಧ ಭಾರಿ ಪ್ರತಿಭಟನೆ

Pinterest LinkedIn Tumblr

5aapನವದೆಹಲಿ:  ಆಮ್ ಆದ್ಮಿ ಶಾಸಕಿ ಅಲ್ಕಾ ಲಾಂಬಾ ವಿರುದ್ಧ ಅಸಭ್ಯ ಭಾಷೆ ಬಳಸಿದ್ದಾರೆ ಎಂದು ಆರೋಪಿಸಲಾದ ಬಿಜೆಪಿ ಶಾಸಕನ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ದೆಹಲಿ ವಿಧಾನಸಭೆ ಸಭಾಪತಿ ರಾಮ್ ನಿವಾಸ್ ಗೋಯಲ್, ಅಸಭ್ಯ ಭಾಷೆ ಬಳಸಿದ ಹಿನ್ನೆಲೆಯಲ್ಲಿ ವಿಶ್ವಾಸನಗರದ ಬಿಜೆಪಿ ಶಾಸಕ ಓ.ಪಿ.ಶರ್ಮಾ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಡಿಫೆನ್ಸ್ ಎನ್‌‌ಕ್ಲೇವ್ ಪ್ರದೇಶದಲ್ಲಿರುವ ಬಿಜೆಪಿ ಶಾಸಕ ಓ.ಪಿ.ಶರ್ಮಾ ನಿವಾಸಕ್ಕೆ ಆಪ್ ಕಾರ್ಯಕರ್ತರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿ, ಅವರ ನಿವಾಸದ ಮುಂದೆ ಪ್ರತಿಭಟನೆ ಆರಂಭಿಸಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆಪ್ ಶಾಸಕಿ ಅಲ್ಕಾ ಲಾಂಬಾ ವಿರುದ್ಧ ಬಿಜೆಪಿ ಶಾಸಕ ಶರ್ಮಾ ಬಳಸಿರುವ ಭಾಷೆಯ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಘಾತ ವ್ಯಕ್ತಪಡಿಸಿದ್ದು, ಬಿಜೆಪಿ ಹೈಕಮಾಂಡ್ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಅಧಿಕಾರದಲ್ಲಿರುವ ಕೇಜ್ರಿವಾಲ್ ನೇತೃತ್ವದ ಸರಕಾರ ನಿರಾಶ್ರಿತರನ್ನು ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ವಿಪಕ್ಷ ನಾಯಕ ವಿಜೇಂದರ್ ಗುಪ್ತಾ ಆರೋಪಿಸಿದ್ದರು. ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಆಪ್ ಶಾಸಕಿ ಲಾಂಬಾ ಚಳಿಯಿಂದ ಯಾರು ಸಾವನ್ನಪ್ಪುತ್ತಿಲ್ಲ ಬದಲಾಗಿ ಡ್ರಗ್ಸ್ ಸೇವನೆಯಿಂದ ಇಹಲೋಕ ತ್ಯಜಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಶರ್ಮಾ ಲಾಂಬಾ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದ್ದರು ಎನ್ನಲಾಗಿದೆ.

Write A Comment