ರಾಷ್ಟ್ರೀಯ

ಶೀನಾ ಪ್ರಕರಣ: ಪೀಟರ್ ಮುಖರ್ಜಿಗೆ ಸುಳ್ಳು ಪತ್ತೆ ಪರೀಕ್ಷೆ

Pinterest LinkedIn Tumblr

peterನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಪೀಟರ್ ಮುಖರ್ಜಿಯವರನ್ನು ಸುಳ್ಳು ಪತ್ತೆ ಪರೀಕ್ಷೆಗೊಳಪಡಿಸಲು ವಿಶೇಷ ನ್ಯಾಯಾಲಯದಿಂದ ಸಿಬಿಐ ಅಧಿಕಾರಿಗಳು ಅನುಮತಿ ಪಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಶೀನಾ ಹತ್ಯೆ ಪ್ರಕರಣ ಸಂಬಂಧ ಇದೀಗ ಪೀಟರ್ ಮುಖರ್ಜಿ ವಿರುದ್ಧ ಹಲವು ಅನುಮಾನಗಳು ಮೂಡಿದ್ದು, ಪ್ರಕರಣ ಸಂಬಂಧ ಪೀಟರ್ ಗೊಂದಲ ಮಾಹಿತಿಗಳನ್ನು ನೀಡುತ್ತಿದ್ದಾರೆಂದು ಸಿಬಿಐ ಅಧಿಕಾರಿಗಳು ಆರೋಪಿಸಿದ್ದರು ಹೀಗಾಗಿ ಪೀಟರ್ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೊಳಪಡಿಸುವ ಅಗತ್ಯತೆ ಇದೆ ನ್ಯಾಯಾಲಯದ ಮುಂದೆ ಅಧಿಕಾರಿಗಳು ಹೇಳಿದ್ದರು. ಅಧಿಕಾರಿಗಳ ಮನವಿಯನ್ನು ಸ್ವೀಕರಿಸುವ ಸಿಬಿಐ ವಿಶೇಷ ನ್ಯಾಯಾಲಯವು ಸುಳ್ಳು ಪತ್ತೆ ಪರೀಕ್ಷೆಗೆ ಇಂದು ಅವಕಾಶ ನೀಡಿದೆ ಎಂದು ತಿಳಿದುಬಂದಿದೆ.. ಮೂಲಗಳ ಪ್ರಕಾರ ಶೀನಾ ಹತ್ಯೆ ಕುರಿತಂತೆ ಪೀಟರ್ ಅವರಿಗೆ ಮೊದಲೇ ಮಾಹಿತಿ ಇದ್ದು ತನಿಖೆ ವೇಳೆ ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ.

ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ದೇಹ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ಶೀನಾ ಹತ್ಯೆಗೆ ತಾಯಿ-ಮಗಳ ಮಧ್ಯೆ ಇರುವ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದಾರೆಂದು ಹೇಳಲಾಗುತ್ತಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ಶೀನಾ ಹತ್ಯೆಗೆ ಹಣಕಾಸಿನ ವ್ಯವಹಾರವೇ ಕಾರಣ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

ಪ್ರಕರಣದಲ್ಲಿ 59 ವರ್ಷದ ಪೀಟರ್ ಮುಖರ್ಜಿಯವರು ಗೊಂದಲ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಆರೋಪಿಸಿದ್ದ ಸಿಬಿಐ ಅಧಿಕಾರಿಗಳು ನವೆಂಬರ್ 19 ರಂದು ಪೀಟರ್ ಅವರನ್ನು ವಶಕ್ಕೆ ಪಡೆದಿದ್ದರು. ಸಿಬಿಐ ಬಂಧನ ನಿನ್ನೆಯಷ್ಟೇ ಪೂರ್ಣಗೊಂಡಿತ್ತು. ಹೀಗಾಗಿ ಪೀಟರ್ ಅವರನ್ನು ಮುಂಬೈಗೆ ಕರೆತಂದಿದ್ದ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಅಲ್ಲದೆ, ಪ್ರಕರಣ ಸಂಬಂಧ ಪೀಟರ್ ಮುಖರ್ಜಿಯನ್ನು ತನಿಖೆ ನಡೆಸಲು ಮತ್ತಷ್ಟು ಅವಕಾಶಬೇಕಿದ್ದು ಪೀಟರ್ ಅವರ ಬಂಧನವನ್ನು ವಿಸ್ತರಿಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿತ್ತು. ಹೀಗಾಗಿ ಅಧಿಕಾರಿಗಳ ಮನವಿಯನ್ನು ಪರಿಶೀಲಿಸದ ನ್ಯಾಯಾಲಯವು ಪೀಟರ್ ಅವರ ಬಂಧನ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿತ್ತು.

Write A Comment