ರಾಷ್ಟ್ರೀಯ

ಪರಿಷತ್ ಚುನಾವಣೆ: ಮುರಿದುಬಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ

Pinterest LinkedIn Tumblr

hdk1ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಜಮೀರ್ ಅಹಮ್ಮದ್ ಖಾನ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದು ಬಿದ್ದಿದೆ.

ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜಮೀರ್ ಅಹಮ್ಮದ್ ಖಾನ್ ಅವರು ಮೈತ್ರಿ ಮಾತುಕತೆಯಿಂದ ಹಿಂದೆ ಸರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಶಾಸಕರ ಸಭೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಪಕ್ಷದೊಳಗೆ ಮೈತ್ರಿ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು.

ಈ ಕುರಿತು ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದರು.

ಇದೇ ವೇಳೆ ಮೈತ್ರಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದ ಜಮೀರ್ ಅಹಮ್ಮದ್ ಖಾನ್ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಅವರು ಯಾರನ್ನೂ ಬೇಕಾದರೂ ಭೇಟಿ ಮಾಡಿ, ತಮ್ಮ ಕ್ಷೇತ್ರಗಳ ಬಗ್ಗೆ ಚರ್ಚಿ ನಡೆಸಲಿ. ಆದರೆ ಪಕ್ಷದ ವಿಚಾರಕ್ಕೆ ಬಂದಾಗ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಬೇಕು ಎಂದರು.

Write A Comment