ರಾಷ್ಟ್ರೀಯ

ಪನ್ಸಾರೆ, ದಾಭೋಲ್ಕರ್, ಕಲಬುರ್ಗಿ ಹತ್ಯೆಯ ನಡುವೆ ಸಂಬಂಧ ಇಲ್ಲ: ಕಿರಣ್ ರಿಜಿಜು

Pinterest LinkedIn Tumblr

rijijuನವದೆಹಲಿ: ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಳ್ಕರ್ ಹಾಗೂ ಎಂಎಂ ಕಲಬುರ್ಗಿ ಅವರ ಹತ್ಯೆಯ ನಡುವೆ ಯಾವುದೇ ಸಂಬಂಧ ಇಲ್ಲ ಎಂದು ಬುಧವಾರ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇಂದು ರಾಜ್ಯಸಭೆಯಲ್ಲಿ ಈ ಕುರಿತು ಲಿಖಿತ ಹೇಳಿಕೆ ನೀಡಿದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು, ‘ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಳ್ಕರ್ ಹಾಗೂ ಎಂಎಂ ಕಲಬುರ್ಗಿ ಅವರ ಹತ್ಯೆಯ ನಡುವೆ ಯಾವುದೇ ಸಂಪರ್ಕ ಅಥವಾ ಸಂಬಂಧ ಇಲ್ಲ’ ಎಂದು ಹೇಳಿದರು.

ಇದೇ ವೇಳೆ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ರಿಜಿಜು, ಬಲಪಂಥಿಯ ಸನಾತನ ಸಂಸ್ಥೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಸದ್ಯ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಪನ್ಸಾರೆ ಹತ್ಯೆ ಪ್ರಕರಣ ಸಂಬಂಧ ಇತ್ತೀಚಿಗೆ ಸನಾತನ ಸಂಸ್ಥೆಯ ಕೆಲವು ಸದಸ್ಯರನ್ನು ಬಂಧಿಸಲಾಗಿತ್ತು.

Write A Comment