ಪಾಟ್ನಾ: ದೇವರಲ್ಲಿ ಬಿಜೆಪಿಗೆ ಯಾವುದೇ ರೀತಿಯ ನಂಬಿಕೆಯಿಲ್ಲ. ಶ್ರೀ ರಾಮ ದೇವರ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಲೇವಡಿ ಮಾಡಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಮ್ಮ ಶ್ರೇಷ್ಠ ಗುರಿ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆಗೆ ಸಿಎಂ ನಿತೀಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಾಮ ಮಂದಿರ ವಿಷಯವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ನಾಯಕರು ರಾಮಮಂದಿರ ನಿರ್ಮಾಣದ ಮಾತುಗಳನ್ನಾಡುತ್ತಾರೆ. ಆದರೆ, ರಾಮಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ದಿನಾಂಕಗಳು ಕೂಡಾ ಬಿಜೆಪಿ ನಾಯಕರು ಮರೆತುಹೋಗಿದ್ದಾರೆ ಎಂದು ಅಪಹಾಸ್ಯ ಮಾಡಿದರು.
ಎರಡು ಸಮುದಾಯಗಳ ನಾಯಕರ ನಡುವಣ ಮಾತುಕತೆಯಿಂದ ಮಾತ್ರ ರಾಮಮಂದಿರ ವಿಷಯ ಸಮಸ್ಯೆ ಇತ್ಯರ್ಥವಾಗಲು ಸಾಧ್ಯ ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.