ರಾಷ್ಟ್ರೀಯ

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಪ್‌ಗೆ ಬಹುಮತ ಖಚಿತ: ಅರವಿಂದ್ ಕೇಜ್ರಿವಾಲ್

Pinterest LinkedIn Tumblr

kejri

ನವದೆಹಲಿ: ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಂಜಾಬ್‌ನಲ್ಲೂ ದೆಹಲಿ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಪಂಜಾಬ್‌ನಲ್ಲಿ ಕೆಲ ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ ಭಾರಿ ಬಹುಮತ ಪಡೆಯಲಿದೆ ಎನ್ನುವುದನ್ನು ಪ್ರಕಟಿಸಿವೆ ಎಂದರು.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪಂಜಾಬ್‌ನಲ್ಲಿ ಮರುಕಳಿಸಿದಲ್ಲಿ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ. ಪಂಜಾಬ್‌ನಲ್ಲಿ 2017ರ ಅವಧಿಯಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ.

ಪ್ರಸ್ತುತ ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ.

Write A Comment