ರಾಷ್ಟ್ರೀಯ

ಗುವಾಹಟಿಯಲ್ಲಿ 2 ಕಚ್ಚಾ ಬಾಂಬ್ ಸ್ಫೋಟ: ಮೂವರಿಗೆ ಗಾಯ

Pinterest LinkedIn Tumblr

blastಗುವಾಹಟಿ: ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಎರಡು ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಗುವಾಹಟಿಯ ಫ್ಯಾನ್ಸಿ ಬಜಾರ್‌ನಲ್ಲಿ ಈ ಸ್ಫೋಟ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯಲ್ಲಿ ಉಲ್ಫಾ ಉಗ್ರರ ಕೈವಾಡ ಇರುವ ಸಾಧ್ಯತೆ ಇದೆ ಎಂದು ಗುವಾಹತಿ ಪೊಲೀಸ್ ಆಯುಕ್ತ ಮುಕೇಶ್ ಅಗರವಾಲ್ ಅವರು ತಿಳಿಸಿದ್ದಾರೆ.

Write A Comment