ರಾಷ್ಟ್ರೀಯ

ಕೇಂದ್ರ, ರಾಜ್ಯ ಸರಕಾರದ ಸಮನ್ವಯತೆ ಕೊರೆತೆಗೆ ಸಿಎಂ ರಾಜೇ ಕಾರಣ: ಕಾಂಗ್ರೆಸ್

Pinterest LinkedIn Tumblr

c-fi

ಜೈಪುರ್: ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರಕಾರವಿದ್ದರೂ ಸಮನ್ವಯತೆ ಕೊರತೆಯಿಂದ ರಾಜ್ಯದ ಜನತೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಆರೋಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರಕಾರವಿದೆ. ರಾಜ್ಯದ 25 ಸಂಸದರು ಕೂಡಾ ಬಿಜೆಪಿಗೆ ಸೇರಿವರಾಗಿದ್ದಾರೆ. ಆದಾಗ್ಯೂ, ಕೇಂದ್ರ ಸರಕಾರದಿಂದ ನೆರವು ಪಡೆಯುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದಿಂದ ರಾಜ್ಯ ಸರಕಾರ ಹೆಚ್ಚಿನ ಅನುದಾನ ಪಡೆಯಬಹುದಿತ್ತು. ಕೇಂದ್ರ ಸರಕಾರ ಮತ್ತು ರಾಜ್ಯದ ಮಧ್ಯದ ತಿಕ್ಕಾಟಕ್ಕೆ ಮುಖ್ಯಮಂತ್ರಿ ವಸುಂಧರಾ ರಾಜೇ ನೇರವಾಗಿ ಹೊಣೆಯಾಗಿದ್ದಾರೆ. ಗುಜರಾತ್, ಮಹಾರಾಷ್ಟ್ರ ಸರಕಾರಗಳು ಕೇಂದ್ರದಿಂದ ಹೆಚ್ಚಿನ ಅನುದಾನ ಪಡೆಯುತ್ತಿವೆ ಎಂದರು.

ರಾಜ್ಯ ಸರಕಾರ ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಆಹ್ವಾನ ನೀಡಿತ್ತು. ಆದರೆ, ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಗೈರುಹಾಜರಾಗಿದ್ದರು. ಸ್ಥಳೀಯ ಕೈಗಾರಿಕೋದ್ಯಮಿಗಳನ್ನು ನಿರ್ಲಕ್ಷಿಸಲಾಗಿತ್ತು ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಹದಗೆಟ್ಟಿದ್ದು, ಅಪರಾಧಿಗಳು ಪೊಲೀಸ್ ವ್ಯಾನ್‌ನಿಂದ ಸಿನೀಮಯ ರೀತಿಯಲ್ಲಿ ಪಾರಾಗುತ್ತಾರೆ. ಆದರೆ, ಪೊಲೀಸರು ಆರೋಪಿಗಳನ್ನು ಬಂಧಿಸಲು ಸಾಧ್ಯವಾಗುವುದಿಲ್ಲ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಮಹಿಳೆಯೇ ಮುಖ್ಯಮಂತ್ರಿಯಾಗಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿವೆ. ಗೃಹ ಸಚಿವರು ಕೂಡಾ ತಮ್ಮ ಕಾರ್ಯನಿರ್ವಹಣೆಯಲ್ಲಿ ವಿಫಲವಾಗಿದ್ದಾರೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಆರೋಪಿಸಿದ್ದಾರೆ.

Write A Comment