ರಾಷ್ಟ್ರೀಯ

ಓರಿಸ್ಸಾ ಮಹಿಳಾ ವಿವಿ ವಿದ್ಯಾರ್ಥಿನಿಯರು ಎಲ್‌ಟಿಟಿಇ ಉಗ್ರರಂತೆ: ಬಿಜೆಡಿ ಶಾಸಕ

Pinterest LinkedIn Tumblr

00fಭುವನೇಶ್ವರ್: ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ರಮಾದೇವಿ ಮಹಿಳಾ ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿನಿಯರನ್ನು ಬಂಧಿಸಿರುವುದನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ ಪ್ರಿಯದರ್ಶಿ ಮಿಶ್ರಾ, ಇಂತಹದ್ದೆ ಘಟನೆಯಲ್ಲಿ 1991ರಲ್ಲಿ ರಾಜೀವ್ ಗಾಂಧಿ ಹತ್ಯೆಯಾಗಿದ್ದರು ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದಾರೆ.

ಓರಿಸ್ಸಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರನ್ನು ಎಲ್‌ಟಿಟಿಇ ಉಗ್ರರಿಗೆ ಹೋಲಿಸಿದ್ದರಿಂದ ವಿಪಕ್ಷಗಳಿಂದ ತೀವ್ರ ಟೀಕೆಗೊಳಗಾಗಿದ್ದಾರೆ.

ವಿಪಕ್ಷಗಳ ವ್ಯಾಪಕ ಟೀಕೆಗಳ ಹಿನ್ನೆಲೆಯಲ್ಲಿ ಕ್ಷಮೆ ಕೋರಿದ ಶಾಸಕ ಪ್ರಿಯದರ್ಶಿ ಮಿಶ್ರಾ, ನಾನು ಕೇವಲ ವಿವಿಐಪಿ ಭದ್ರತೆ ಬಗ್ಗೆ ಹೇಳಿಕೆ ನೀಡಿದ್ದೇನೆ. ಾರ ಮನಸ್ಸನ್ನು ನೋಯಿಸುವ ಉದ್ದೇಶವಿಲ್ಲ. ಒಂದು ವೇಳೆ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ದಯವಿಟ್ಟು ಕ್ಷಮಿಸಿ ಎಂದು ಹೇಳಿದ್ದಾರೆ.

ಮಿಶ್ರಾ ಹೇಳಿಕೆಯ ಬಗ್ಗೆ ವಿಪಕ್ಷಗಳು ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ್ದಲ್ಲದೇ, ರಾಜ್ಯಾದ್ಯಂತ ಭಾರಿ ಪ್ರತಿಭಟನೆಗಲಿಗೆ ಕಾರಣವಾಗಿತ್ತು. ವಿದ್ಯಾರ್ಥಿ ಸಂಘಟನೆಗಳು ಶಾಸಕರ ಪುತ್ಥಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

Write A Comment