ರಾಷ್ಟ್ರೀಯ

ಬಾಬ್ರಿ ಮಸೀದಿ ಧ್ವಂಸ ವರ್ಷಾಚಾರಣೆ: ಹೈದ್ರಾಬಾದ್ ಬಂದ್‌ಗೆ ಓವೈಸಿ ಕರೆ

Pinterest LinkedIn Tumblr

uf

ಹೈದ್ರಾಬಾದ್: ಬಾಬ್ರಿ ಮಸೀದಿ ಧ್ವಂಸ 23ನೇ ವರ್ಷಾಚಾರಣೆ ವಿರೋಧಿಸಿ  ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸಂಘಟನೆ ಹೈದ್ರಬಾದ್‌ ಬಂದ್‌ಗೆ ಕರೆ ನೀಡಿದೆ.

ಬಾಬ್ರಿ ಮಸೀದಿ ಧ್ವಂಸ 23ನೇ ವರ್ಷಾಚಾರಣೆ ಸಂದರ್ಭದಲ್ಲಿ ಕೆಲ ಗುಂಪುಗಳು ನಗರದಲ್ಲಿ ಉದ್ರಿಕ್ತ ವಾತಾವರಣ ಸೃಷ್ಟಿಸುವ ಸಂಚು ನಡೆಸುತ್ತಿರುವ ಹಿನ್ನೆಲೆಯಲ್ಲಿ ಹೈದ್ರಾಬಾದ್ ನಗರಾದ್ಯಂತ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಕರ್ಫ್ಯೂ ಜಾರಿಗೊಳಿಸಿದ್ದಾರೆ.

ಸೋಮುವಾರ ಸಂಜೆ 7 ಗಂಟೆಯವರೆಗೆ ನಗರಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಹೈದ್ರಾಬಾದ್ ನಗರ ಪೊಲೀಸ್ ಆಯುಕ್ತ ಎಂ.ಮಹೇಂದ್ರ ರೆಡ್ಡಿ ತಿಳಿಸಿದ್ದಾರೆ.

ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ ಎಂದು ಪೊಲೀಸರು ಕಟ್ಟು ನಿಟ್ಟಿನ ಆದೇಶ ಜಾರಿಗೊಳಿಸಿದ್ದಾರೆ.

ನಗರದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಕೋಮುಸೌಹಾರ್ದಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮಹೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

Write A Comment