ರಾಷ್ಟ್ರೀಯ

ಉ.ಪ್ರದೇಶದಲ್ಲಿ ಬಿಜೆಪಿ- ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಮಾಯಾವತಿ

Pinterest LinkedIn Tumblr

mayawati

ಹೊಸದಿಲ್ಲಿ,ಡಿ.8: 2017ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಬಿಎಸ್ಪಿಯು ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಎಲ್ಲ 403 ಸ್ಥಾನಗಳಿಗೆ ತನ್ನ ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು.

ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸಮಾಜವಾದಿ ಪಾರ್ಟಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುಳ್ಳು ವದಂತಿಗಳನ್ನು ಹರಡುತ್ತಿದೆ ಎಂದು ಆರೋಪಿಸಿದರಲ್ಲದೆ, ಎಸ್‌ಪಿಯೇ ಬಿಜೆಪಿಯೊಂದಿಗೆ ಕೈಜೋಡಿಸಿದೆ. ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನೆರವಾಗಲೆಂದೇ ಅದು ಮಹಾಮೈತ್ರಿ ಕೂಟದಿಂದ ಹೊರಗೆ ಬಂದಿತ್ತು ಎಂದು ಪ್ರತಿಪಾದಿಸಿದರು.

ಎಸ್‌ಪಿ ವಿರುದ್ಧ ತೀವ್ರ ದಾಳಿ ನಡೆಸಿದ ಅವರು, ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ ಮತ್ತು ರಾಜ್ಯದಲ್ಲಿ ಕೋಮು ಉದ್ವಿಗ್ನತೆ ನೆಲೆಸಿದೆ. ಉ.ಪ್ರದೇಶದ ಜನರು ರಾಜ್ಯದಲ್ಲಿ ಬದಲಾವಣೆಯನ್ನು ನಿರೀಕ್ಷಿಸಿದ್ದಾರೆ ಮತ್ತು ಬಿಎಸ್ಪಿ ಅಧಿಕಾರಕ್ಕೆ ಬರಬೇಕೆಂದು ಬಯಸಿದ್ದಾರೆ ಎಂದರು.

ವಿ.ಕೆ.ಸಿಂಗ್ ವಿವಾದ ಕುರಿತಂತೆ ಅವರು, ಸಿಂಗ್ ರಾಜೀನಾಮೆಗಾಗಿ ನಾವು ಅಧಿವೇಶನ ಆರಂಭಗೊಳ್ಳುವ ಮುನ್ನವೇ ಆಗ್ರಹಿಸಿದ್ದೆವು. ಆದರೆ ಸರಕಾರವು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ ಮತ್ತು ತನ್ನ ದಲಿತ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದರು.

ಕಾಂಗ್ರೆಸ್ ವಿರುದ್ಧವೂ ಹರಿಹಾಯ್ದ ಮಾಯಾವತಿ, ಅದು ರಾಜಕೀಯ ಉದ್ದೇಶಗಳಿಗಾಗಿ ಮಾತ್ರ ದಲಿತರ ವಿಷಯವನ್ನೆತ್ತುತ್ತದೆ ಎಂದರು.

Write A Comment