ರಾಷ್ಟ್ರೀಯ

ನಟಿ, ವೈಎಸ್‌ಆರ್ ಶಾಸಕಿ ರೋಜಾ ನಿಮ್ಸ್ ಆಸ್ಪತ್ರೆಗೆ ದಾಖಲು

Pinterest LinkedIn Tumblr

roja-19

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ವಿರುದ್ಧ ಅನುಚಿತ ಪದ ಬಳಸಿ ವಿಧಾಸಭೆಯಿಂದ ಒಂದು ವರ್ಷಗಳ ಕಾಲ ಅಮಾನತುಗೊಂಡಿದ್ದ ಬಹು ಭಾಷಾ ನಟಿ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಶಾಸಕಿ ರೋಜಾ ಅವರು ಶನಿವಾರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಮಾನತುಗೊಂಡಿದ್ದರೂ ಇಂದು ವಿಧಾನಸಭೆ ಪ್ರವೇಶಿಸಲು ಯತ್ನಿಸಿದ ರೋಜಾ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರೋಜಾ ಪೊಲೀಸರೊಂದಿಗೆ ತೀವ್ರ ವಾಗ್ವಾದದಕ್ಕಿಳಿದಿದ್ದು, ವಾದ ತಾರಕಕ್ಕೇರುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ತಕ್ಷಣ ಸ್ಥಳದಲ್ಲೇ ಕುಸಿದುಬಿದ್ದ ರೋಜಾ ಅವರನ್ನು ನಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗಮೋಹನ್ ರೆಡ್ಡಿ ಅವರು ರೋಜಾ ಅವರ ಆರೋಗ್ಯ ವಿಚಾರಿಸಿದರು. ಅಲ್ಲದೆ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಗಮೋಹನ್ ರೆಡ್ಡಿ ಹಾಗೂ ಇತರ ವೈಎಸ್‌ಆರ್ ಕಾಂಗ್ರೆಸ್ ನಾಯಕರು ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಚಂದ್ರಬಾಬು ನಾಯ್ಡು ವಿರುದ್ಧ ಅನುಚಿತ ಪದ ಬಳಸಿದ ಹಿನ್ನೆಲೆಯಲ್ಲಿ ನಿನ್ನೆ ಆಂಧ್ರ ವಿಧಾಸಭೆ ಸ್ಪೀಕರ್ ಕೆ.ಶಿವಪ್ರಸಾದ್ ರಾವ್ ಅವರು ರೋಜಾ ಅವರನ್ನು ಒಂದು ವರ್ಷಗಳ ಕಾಲ ಅಮಾನತುಗೊಳಿಸಿದ್ದರು.

Write A Comment