ನವದೆಹಲಿ: ಪಾಕಿಸ್ತಾನ ವಿಷಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಅವಕಾಶ ನೀಡಬೇಕೆಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಡಿ.25 ರಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದರ ಬಗ್ಗೆ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಪಾಕ್- ಭಾರತ ದ್ವಿಪಕ್ಷೀಯ ಸಂಬಂಧದ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿಯಾಗಿರಬಹುದಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಅವಕಾಶ ನೀಡಬೇಕಿದೆ ಎಂದು ಸ್ವಾಮಿ ಹೇಳಿದ್ದಾರೆ.
ಮೋದಿ ಅವರ ಅನಿರೀಕ್ಷಿತ ಪಾಕಿಸ್ತಾನ ಭೇಟಿಗೆ ಕಾಂಗ್ರೆಸ್ ನಿಂದ ವಿರೋಧ ವ್ಯಕ್ತವಾಗಿತ್ತು.