ರಾಷ್ಟ್ರೀಯ

ಮುಫ್ತಿ ಮೊಹಮ್ಮದ್ ಸಯೀದ್ ಆರೋಗ್ಯ ಸ್ಥಿತಿ ಇನ್ನೂ ಗಂಭೀರ

Pinterest LinkedIn Tumblr

1-mufti-WEbನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಆರೋಗ್ಯ ಸ್ಥಿತಿಯಲ್ಲಿ ಇನ್ನೂ ಸುಧಾರಣೆ ಕಂಡು ಬಂದಿಲ್ಲ. ಅವರನ್ನು ಇನ್ನೂ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

13 ದಿನಗಳಿಂದ ಮುಫ್ತಿ ಅವರು ಏಮ್ಸ್​ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಫ್ತಿ ತೀವ್ರ ಜ್ವರ ಮತ್ತು ಕತ್ತು ನೋವಿನಿಂದ ಬಳಲುತ್ತಿದ್ದಾರೆ. ಮುಫ್ತಿ ಅವರು ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆಸ್ಪತ್ರೆಗೆ ದಾಖಲಾದ ದಿನ ಪ್ಲೇಟ್ ಲೆಟ್ ಸಂಖ್ಯೆ ಕಡಿಮೆ ಇತ್ತು ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು.

ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡು ಬಂದಿಲ್ಲ ಆದರೆ, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Write A Comment