ಶ್ರೀನಗರ/ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ಪಷ್ಟ ಪಡಿಸಿದ್ದಾರೆ.
ನಾವು ಅಧಿಕಾರವನ್ನು ಬಯಸುತ್ತಿಲ್ಲ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದ ದೊರೆಯುವ ಅಧಿಕಾರದ ಅವಶ್ಯಕತೆ ನಮಗಿಲ್ಲ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು 1 ವರ್ಷ ಮೊದಲೇ ತಿಳಿಸಿದ್ದೆವು. ನಾವು ಅದೇ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ಬಿಜೆಪಿ ಮೈತ್ರಿ ಬಯಸಿದರೆ, ಪಕ್ಷದಲ್ಲಿ ರ್ಚಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಬಿಜೆಪಿ ಮತ್ತು ಪಿಡಿಪಿಗೆ ಸರ್ಕಾರ ರಚಿಸುವ ಇಚ್ಛೆ ಇಲ್ಲದಿದ್ದರೆ, ಸರ್ಕಾರವನ್ನು ವಿಸರ್ಜಿಸಿ ಚುನಾವಣೆ ಘೊಷಣೆ ಮಾಡಲಿ ಎಂದು ಅಬ್ದುಲ್ಲಾ ಪಿಡಿಪಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.